ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಯಮದ ಕೊರತೆ ಸಮಸ್ಯೆಯ ಮೂಲ

Last Updated 2 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ರಾಮನಗರ: ಸಂಯಮದ ಕೊರತೆಯಿಂದ ಸಮಾಜದಲ್ಲಿ ಇಂದು ಅನೇಕ ಸಮಸ್ಯೆಗಳು ಎದುರಾಗುತ್ತಿವೆ ಎಂದು ಚನ್ನಪಟ್ಟಣ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಶಿವರಾಮೇಗೌಡ ನಾಗವಾರ ಅಭಿಪ್ರಾಯಪಟ್ಟರು.

ಜಾಲಮಂಗಲದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿದ್ದ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ವ್ಯಾಸಂಗದ ಅವಧಿಯಲ್ಲಿ ವಿದ್ಯಾಭ್ಯಾಸವೇ ಪ್ರಮುಖವಾಗಬೇಕು. ಇದನ್ನು ಬಿಟ್ಟ ಮನಸ್ಸನ್ನು ಇತರ ವಿಷಯಗಳತ್ತ ಹರಿಸಿದರೆ ಅದು ಫಲಿತಾಂಶದ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಕಿವಿಮಾತು ಹೇಳಿದರು.

ಇಂದಿನ ಪರಿಸ್ಥಿತಿಯಲ್ಲಿ ಜ್ಞಾನದ ದಾಹ ವಿಸ್ತಾರ ವಾಗುತ್ತಿದೆ. ಕಲಾ ವಿಭಾಗದ ವಿದ್ಯಾರ್ಥಿಗಳೂ ಕಂಪ್ಯೂಟರ್ ಮತ್ತು ಅಂತರ್ಜಾಲದ ಜ್ಞಾನವನ್ನು ಬೆಳೆಸಿಕೊಳ್ಳುವುದು ಅತ್ಯವಶ್ಯಕ ಎಂದು ಅವರು ತಿಳಿಸಿದರು.

ಕೆಂಗಲ್ ಹನುಮಂತಯ್ಯನವರು ಮುಖ್ಯಮಂತ್ರಿ ಯಾಗಿದ್ದಾಗ ಜಾಲಮಂಗಲದಲ್ಲಿ ಪ್ರೌಢಶಾಲೆ ಮಂಜೂ ರಾಯಿತು. ಹಾಗಾಗಿ ಹೆಣ್ಣು ಮಕ್ಕಳೂ ಸೇರಿದಂತೆ ಹೆಚ್ಚಿನ ಸಂಖ್ಯೆಯ ಜನರು ಈ ಪ್ರದೇಶದಲ್ಲಿ ವಿದ್ಯಾವಂತರೂ ಉದ್ಯೋಗಸ್ಥರೂ ಆಗುವುದು ಸಾಧ್ಯವಾಯಿತು ಎಂದು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಪುಟ್ಟಮಾರೇಗೌಡರು ನೆನಪಿಸಿಕೊಂಡರು.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆಂಚಪ್ಪ ಮಾತನಾಡಿ, ಕಾಲೇಜಿಗೆ ರಾಮನಗರ ಜಿಲ್ಲೆಯಲ್ಲೇ ಉತ್ತಮವಾದ ಫಲಿತಾಂಶ ಬರುತ್ತಿದ್ದು ಇದಕ್ಕೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದ ಶ್ರಮ ಕಾರಣವಾಗಿದೆ. ಮುಂದೆಯೂ ವಿದ್ಯಾರ್ಥಿಗಳು ಹಿರಿಯರ ಹಾದಿಯಲ್ಲಿ ನಡೆದು ಉತ್ತಮ ಫಲಿತಾಂಶ ಪಡೆಯುವಂತೆ ಅವರು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಶಿವರಾಮೇಗೌಡ ನಾಗವಾರ ಅವರನ್ನು ಕಾಲೇಜು ಹಾಗೂ ನಾಗರಿಕರ ಪರವಾಗಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಬಿ.ಎಲ್.ಸರೋ ಜಮ್ಮ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ  ಶಾಂತಮ್ಮ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ಗಂಗಮ್ಮ, ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಶಶಿಕಲಾ, ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT