ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನದಲ್ಲಿ ತಿದ್ದುಪಡಿಗೆ ಒಪ್ಪಿಗೆ

Last Updated 8 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ನಿಷೇಧದ ಭೀತಿಗೆ ಒಳಗಾಗಿದ್ದ ಭಾರತೀಯ ಒಲಿಂಪಿಕ್ ಸಂಸ್ಥೆಯು (ಐಒಎ) ಕೊನೆಗೂ ತನ್ನ ಸಂವಿಧಾನಕ್ಕೆ ತಿದ್ದು ಪಡಿ ತಂದಿದೆ. ಈ ಮೂಲಕ ಅಂತ ರರಾಷ್ಟ್ರೀಯ ಒಲಿಂಪಿಕ್ ಸಮಿತಿಯ (ಐಒಸಿ) ಒತ್ತಡಕ್ಕೆ ಮಣಿದಿದೆ.

ಮಹತ್ವದ ಈ ತಿದ್ದುಪಡಿ ತಂದಿರುವ ಕಾರಣ ಭ್ರಷ್ಟಾಚಾರ ಒಳಗೊಂಡಂತೆ ಇತರ ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವವರು ಇನ್ನು ಮುಂದೆ ಸಂಸ್ಥೆಯ ಚುನಾವ ಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಅಷ್ಟು ಮಾತ್ರವಲ್ಲದೇ, ಐಒಸಿ ಮಾನ್ಯತೆಯನ್ನು ಉಳಿಸಿಕೊಳ್ಳುವತ್ತ ಐಒಎ ಮೊದಲ  ಹೆಜ್ಜೆ ಇಟ್ಟಿದೆ. ಭಾನುವಾರ ಇಲ್ಲಿ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಂಸ್ಥೆಯು ಈ ನಿರ್ಧಾರ ತೆಗೆದುಕೊಂಡಿದೆ.

‘ಡಿಸೆಂಬರ್‌ 10ರೊಳಗೆ ತಿದ್ದು ಪಡಿ ತರಬೇಕು, ಇಲ್ಲದಿದ್ದರೆ ಡಿ.10 ಹಾಗೂ 11ರಂದು ನಡೆಯಲಿರುವ ಕಾರ್ಯನಿರ್ವಾಹಕ ಮಂಡಳಿ ಸಭೆಯಲ್ಲಿ ಐಒಎ ಮಾನ್ಯತೆಯನ್ನು ರದ್ದುಗೊಳಿಸಲಾಗುವುದು’ ಎಂದು ಐಒಸಿ  ಎಚ್ಚರಿಕೆ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT