ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ದಶರಥ ವಿರುದ್ಧ ದೋಷಾರೋಪ

Last Updated 16 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಗುಲ್ಬರ್ಗ: ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನಕ್ಕೆ ಒಳಗಾ­ಗಿ­ರುವ ಗುಲ್ಬರ್ಗ ವಿಶ್ವವಿದ್ಯಾಲ­ಯದ ಅರ್ಥ­ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ದಶರಥ ನಾಯಕ ವಿರುದ್ಧ ಇಲ್ಲಿನ ಜಿಲ್ಲಾ ನ್ಯಾಯಾಲಯ ಭಾನು­ವಾರ ಆರೋಪ ನಿಗದಿ ಮಾಡಿದೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದಶರಥ ವಿರುದ್ಧ ದೋಷಾರೋಪ ಪಟ್ಟಿ ಸಿದ್ಧಪಡಿಸಲಾಗಿದೆ.

ಆರೋಪಗಳ ವಿವರ: ಐಪಿಸಿ 509–ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವ ಉದ್ದೇಶವಿರುವ ಶಬ್ದ, ಸಂಜ್ಞೆ ಬಳಕೆ ಹಾಗೂ ಮಹಿಳೆ ಏಕಾಂತ­ದಲ್ಲಿ­ದ್ದಾಗ ಅಕ್ರಮ ಪ್ರವೇಶ ಮಾಡು­ವುದು, 384–ಹಣ ಸುಲಿಗೆ, 354, 354 (ಎ)–ಮಹಿಳೆಯ ಚಾರಿತ್ರ್ಯ ಹರಣ, 504–ಉದ್ದೇಶ ಪೂರ್ವಕ­ವಾಗಿ ಶಾಂತಿ ಕದಡಿದ ಆರೋಪ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ 67 (ಎ) ಸೆಕ್ಷನ್‌ ಅಡಿ ದೋಷಾ­ರೋಪಣೆ ಹೊರಿಸಿದೆ.

ವಿ.ಸಿ ಹಠಾವೋ ಇಂದು: ಗುಲ್ಬರ್ಗ ವಿವಿ ಅರ್ಥಶಾಸ್ತ್ರ ವಿಭಾಗದ ಸಂಶೋ­ಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವೀರಶೈವ ಯುವ ಬಳಗವು ಡಿ. 17 ರಂದು ಬೆಳಿಗ್ಗೆ 11 ಗಂಟೆಗೆ ‘ವಿ.ಸಿ ಹಠಾವೋ; ವಿ.ವಿ ಬಚಾವೋ’ ಅಂಗ­ವಾಗಿ ಪ್ರತಿಭಟನಾ ಮೆರವಣಿಗೆಯನ್ನು ಏರ್ಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT