ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್ ಅಧಿವೇಶನ ಮುಂದೂಡಿಕೆ

Last Updated 3 ಡಿಸೆಂಬರ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಐ. ಕೆ. ಗುಜ್ರಾಲ್ ಅವರಿಗೆ ಸಂತಾಪ ಸೂಚಿಸುವುದರೊಂದಿಗೆ ಸೋಮವಾರ ಸಂಸತ್ತಿನ ಉಭಯ ಸದನಗಳ ಕಾರ್ಯಕಲಾಪಗಳನ್ನು ಮುಂದೂಡಲಾಯಿತು. 

ಲೋಕಸಭೆಯಲ್ಲಿ ಮಾತನಾಡಿದ ಅಧ್ಯಕ್ಷೆ ಮೀರಾ ಕುಮರ್, ಗುಜ್ರಾಲ್ ಅವರೊಬ್ಬ ಅಪರೂಪದ ರಾಜಕಾರಣಿ ಹಾಗೂ ಖ್ಯಾತ ನಾಯಕ ಎಂದು ಬಣ್ಣಿಸಿದರು.

ಈ ಮಧ್ಯೆ ರಾಜ್ಯಸಭೆಯಲ್ಲಿ ಮಾತನಾಡಿದ ಸಭಾಪತಿ ಹಮೀದ್ ಅನ್ಸಾರಿ, ಗುಜ್ರಾಲ್ ಅವರ ನಿಧನದಿಂದ ದೇಶ ಒಬ್ಬ ಸ್ವಾತಂತ್ರ್ಯ ಹೋರಾಟಗಾರ, ಉತ್ತಮ ಆಡಳಿತಗಾರ ಹಾಗೂ  ಜ್ಞಾನಿಯನ್ನು ಕಳೆದುಕೊಂಡಂತಾಗಿದೆ ಎಂದು ಹೇಳಿದರು.

ಮೃತರ ಗೌರವಾರ್ಥ ಮೌನ ಆಚರಿಸಿದ ಬಳಿಕ ಉಭಯ ಸದನಗಳನ್ನು ಮಂಗಳವಾರಕ್ಕೆ ಮುಂದೂಡಲಾಯಿತು.
ಇದೇ ವೇಳೆ ಭೋಪಾಲ್ ಅನಿಲ ದುರಂತ ಸಂಭವಿಸಿ 28 ವರ್ಷಗಳು ಸಂದ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT