ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸದೆ ಹಕ್ಕುಚ್ಯುತಿ ದೂರು ಅಧಿಕಾರಿಗಳಿಗೆ ಬುಲಾವ್

Last Updated 11 ಜುಲೈ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸಂಸದೆಯೊಬ್ಬರ ದೂರಿನ ಹಿನ್ನೆಲೆಯಲ್ಲಿ ಸಂಸತ್ತಿನ ಹಕ್ಕುಬಾಧ್ಯತಾ ಸಮಿತಿಯು ಗುಜರಾತ್‌ದಾಹೊದ್ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇಬ್ಬರು ಡಿವೈಎಸ್ಪಿಗಳಿಗೆ ಹಾಜರಾಗುವಂತೆ ಸೂಚಿಸಿದೆ.

ಮೇ 1ರಂದು ಏರ್ಪಡಿಸಿದ್ದ `ಗುಜರಾತ್ ದಿವಸ್~ದಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ ಸರ್ಕಾರಿ ಅಧಿಕಾರಿಗಳು ತನ್ನನ್ನು ಎಳೆದಾಡಿ ಹಲ್ಲೆ ನಡೆಸಿದ್ದರು ಎಂದು ಕಾಂಗ್ರೆಸ್ ಸಂಸದೆ ಪ್ರಭಾ ಕಿಶೋರ್ ತವಿಯಡ್ ಅವರು ಸಮಿತಿಗೆ ದೂರು ಸಲ್ಲಿಸಿದ್ದರು.

ಈ ಎಲ್ಲ ಅಧಿಕಾರಿಗಳ ಹೇಳಿಕೆ ಆಧರಿಸಿ, ಡಿಜಿಪಿ ಸೇರಿದಂತೆ ಇತರ ಹಿರಿಯ ಅಧಿಕಾರಿಗಳನ್ನು ಕರೆಸಿಕೊಳ್ಳಲಾಗುವುದು ಎಂದು ಸಮಿತಿ ತಿಳಿಸಿದೆ. ಅಧಿಕಾರಿಗಳ ವಿಚಾರಣೆ ನಡೆಸುವ ದಿನದಂದೇ ತವಿಯಡ್ ಅವರನ್ನು ಕರೆಯಿಸಿ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಾಕ್ಷ್ಯಾಧಾರ ನೀಡುವಂತೆ ತಿಳಿಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ಪಿ.ಸಿ. ಚಾಕೋ ತಿಳಿಸಿದ್ದಾರೆ.
 
ಸಂಸದರನ್ನು ದೂಷಿಸಿರುವ ಸಾಮಾಜಿಕ ಕಾರ್ಯಕರ್ತ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಂದಿರುವ ಹಕ್ಕುಚ್ಯುತಿ ನೋಟಿಸ್‌ಗೆ ಸಂಬಂಧಿಸಿದಂತೆ ಸಮಿತಿ ಯಾವುದೇ ರೀತಿಯ ಚರ್ಚೆ ನಡೆಸಲಿಲ್ಲ. ಮುಂದಿನ ಸಭೆಯಲ್ಲಿ ಈ ಕುರಿತು ಚರ್ಚಿಸುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT