ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವರ ಕಾರ್ಯವೈಖರಿ: ರಾಜ್ಯಪಾಲರ ಅತೃಪ್ತಿ

ಕುಲಪತಿಗಳ ನೇಮಕಾತಿಯಲ್ಲಿ ಅನಗತ್ಯ ವಿಳಂಬ
Last Updated 4 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಕಾರವಾರ: ‘ಸಿಎಂ ಸಿದ್ದ­ರಾಮಯ್ಯ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿ­ದ್ದಾರೆ. ಆದರೆ, ಕೆಲ ಸಚಿವರ ಕಾರ್ಯ­ವೈಖರಿಯಿಂದಾಗಿ ಅವರಿಗೆ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲು ಸಾಧ್ಯವಾ­ಗುತ್ತಿಲ್ಲ’ ಎಂದು ರಾಜ್ಯಪಾಲ ಎಚ್‌.ಆರ್‌.­ ಭಾರ­ದ್ವಾಜ್‌ ಬುಧವಾರ ಅಸಮಾಧಾನ ವ್ಯಕ್ತಪಡಿಸಿದರು.

ಇಲ್ಲಿಗೆ ಸಮೀಪದ ಅರ್ಗಾದ ಐಎನ್ಎಸ್ ಕದಂಬ ನೌಕಾನೆಲೆಯಲ್ಲಿ ನೌಕಾ ಸಪ್ತಾಹದಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ‘ಆ ಸಚಿವರಿಗೆ ಕಾರ್ಯವೈಖರಿ­ಯನ್ನು ಸರಿಪಡಿಸಿ­ಕೊಳ್ಳುವಂತೆ ಹಲವು ಬಾರಿ ಸಲಹೆ ನೀಡಿದ್ದೇನೆ. ಆದರೂ ಯಾವುದೇ ಬದಲಾವಣೆ ಕಾಣುತ್ತಿಲ್ಲ. ಸರ್ಕಾರ ಇನ್ನೂ ಉತ್ತಮ­ವಾಗಿ ಕೆಲಸ ಮಾಡಲು ಸಚಿವರು, ಶಾಸಕರು ಮುಖ್ಯಮಂತ್ರಿಗೆ ಸಹಕಾರ ನೀಡಬೇಕು’ ಎಂದು ಸಲಹೆ ಮಾಡಿದರು.

‘ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕಾತಿಯಲ್ಲಿ ಸರ್ಕಾರ ಅನಗತ್ಯವಾಗಿ ವಿಳಂಬ ಮಾಡುತ್ತಿದೆ. ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಿ ಸೂಚಿಸಿದರೆ ಅದಕ್ಕೆ ಒಪ್ಪಿಗೆ ನೀಡುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT