ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವರ ರಾಜೀನಾಮೆ ಪ್ರಹಸನ: ಧರಣಿ

Last Updated 2 ಜುಲೈ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ರಾಜ್ಯ ಸರ್ಕಾರದ ಮಂತ್ರಿಗಳು ರಾಜೀನಾಮೆಯ ನಾಟಕದಲ್ಲಿ ಮುಳುಗಿ ರಾಜ್ಯದ ಜನತೆಯ ಹಿತ ಮರೆತಿದ್ದಾರೆ~ ಎಂದು ಆರೋಪಿಸಿ ನಗರ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಆನಂದರಾವ್ ವೃತ್ತದ ಬಳಿಯ ಮಹಾತ್ಮ ಗಾಂಧಿ ಪ್ರತಿಮೆಯ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

`ತಮ್ಮ ಸ್ವಾರ್ಥಕ್ಕಾಗಿ ಮಂತ್ರಿಗಳು ಭಿನ್ನಮತ, ಸಾಮೂಹಿಕ ರಾಜೀನಾಮೆ ಮತ್ತು ರಾಜೀನಾಮೆ ಹಿಂಪಡೆಯುವ ನಾಟಕವಾಡುತ್ತಿದ್ದಾರೆ. ಬಿಜೆಪಿ ಪಕ್ಷದ ಮಂತ್ರಿಗಳಿಗೆ ರಾಜ್ಯದ ಅಭಿವೃದ್ಧಿಯ ಕಡೆಗೆ ಗಮನವೇ ಇದ್ದಂತಿಲ್ಲ. ಮಂತ್ರಿಗಳು ಸ್ವಾರ್ಥ ರಾಜಕಾರಣದ ಮೂಲಕ ರಾಜ್ಯದ ಆಡಳಿತಕ್ಕೆ ಕುತ್ತು ತಂದಿದ್ದಾರೆ. ರಾಜ್ಯಪಾಲರು ಈ ಸರ್ಕಾರವನ್ನು ವಿಸರ್ಜಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರಬೇಕು~ ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

`ರಾಜ್ಯದ ಮಂತ್ರಿಗಳು ಮರದ ಮೇಲಿನ ಕೋತಿಗಳಂತೆ ವರ್ತಿಸುತ್ತಿದ್ದಾರೆ~ ಎಂದು ಆರೋಪಿಸಿದ ಕಾರ್ಯಕರ್ತರು ಮಂತ್ರಿಗಳ ಮುಖವಾಡ ಧರಿಸಿ ಅದೇ ರೀತಿಯಲ್ಲಿ ಅಣಕು ಪ್ರದರ್ಶನ ನಡೆಸಿದರು.
ಪ್ರತಿಭಟನೆಯಲ್ಲಿ ನಗರ ಯುವ ಕಾಂಗ್ರೆಸ್ ಸಮಿತಿಯ ಸದಸ್ಯರಾದ ಎಸ್.ಮನೋಹರ್, ಡಿ.ಎ.ಪ್ರಮೋದ್ ಶಂಕರ್ ಮತ್ತಿತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT