ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಸಣ್ಣ ಕೈಗಾರಿಕೆ ಸ್ಥಾಪನೆಗೆ ವಿಶೇಷ ಯೋಜನೆ'

Last Updated 21 ಡಿಸೆಂಬರ್ 2012, 8:12 IST
ಅಕ್ಷರ ಗಾತ್ರ
ಬೆಳಗಾವಿ: `ಗ್ರಾಮೀಣ ಪ್ರದೇಶದಲ್ಲಿ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಿ ಸ್ವಯಂ ಉದ್ಯೋಗ ಕೈಗೊಳ್ಳಲು ಕೈಗಾರಿಕಾ ಇಲಾಖೆಯ ವತಿಯಿಂದ ಅನೇಕ ಉತ್ತೇಜನ ಹಾಗೂ ಸಬ್ಸಿಡಿ ಕೊಡುವ ಯೋಜನೆಗಳಿವೆ' ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಎ.ಬಿ.ಪರಡ್ಡಿ ಹೇಳಿದರು. 
 
ಇಲ್ಲಿನ ಕುಮಾರಗಂಧರ್ವ ರಂಗಮಂದಿರದಲ್ಲಿ ವಾರ್ತಾ ಇಲಾಖೆ ಸ್ವಯಂ ಉದ್ಯೋಗ ಹಾಗೂ ಯುವಜನರು  ಎಂಬ ವಿಷಯ ಕುರಿತು ಏರ್ಪಡಿಸಿದ್ದ ವಿಚಾರಸಂಕಿರಣವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. 
 
ಗ್ರಾಮೀಣ ಪ್ರದೇಶದಲ್ಲಿರುವ ಬಡವರು, ಯುವಕರು, ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರಿಗೆ ಅನೇಕ ಉತ್ತೇಜನಗಳನ್ನು ನೀಡಲಾಗುತ್ತಿದೆ. ಈ ಎಲ್ಲ ವರ್ಗದ ಜನರು ಇದರ ಲಾಭ ಪಡೆಯಬೇಕು ಎಂದರು. 
 
ಗ್ರಾಮೀಣ ಪ್ರದೇಶದಲ್ಲಿ ಸಣ್ಣ ಹಾಗೂ ಅತೀ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲು ಸಬ್ಸಿಡಿ ನೀಡುವುದರ ಜೊತೆಗೆ ಬಂಡವಾಳ ಹೂಡಲು ಸಹ ಹಣಕಾಸು ನೆರವನ್ನು ನೀಡಲಾಗುವುದು. ಕೈಗಾರಿಕೆ ಸ್ಥಾಪಿಸುವುದರ ಮುನ್ನ ಯುವಜನರಿಗೆ ಅನೇಕ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಯುವಜನರು ಆಯಾ ಜಿಲ್ಲೆಗಳ ಜಿಲ್ಲಾ ಕೈಗಾರಿಕಾ ಕೇಂದ್ರಗಳನ್ನು ಅಥವಾ ತಾಲ್ಲೂಕಿನಲ್ಲಿರುವ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಹೇಳಿದರು. 
 
ಪ್ರಧಾನ ಮಂತ್ರಿಗಳ ಉದ್ಯೋಗ ಸೃಷ್ಟಿ ಯೋಜನೆಯಲ್ಲಿ ಸಾಕಷ್ಟು ಸ್ವಯಂ ಉದ್ಯೋಗಕ್ಕಾಗಿ ಅವಕಾಶಗಳಿವೆ. ಸ್ಥಳೀಯ ಸಂಪನ್ಮೂಲಗಳ ಲಭ್ಯತೆಗೆ ಅನುಗುಣವಾಗಿ ಯುವಜನರು ಕೈಗಾರಿಕೆಗಳನ್ನು ಸ್ಥಾಪಿಸಬಹುದಾಗಿದೆ ಎಂದರು. 
 
ಬೆಳಗಾವಿ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸೂರ್ಯಕಾಂತ ಆರ್.ಗಂಗಾ ಅವರು, ಬ್ಯಾಂಕುಗಳು ಸ್ವಯಂ ಉದ್ಯೋಗ ಸ್ಥಾಪಿಸಲು ಉದಾರವಾಗಿ ಹಣಕಾಸು ನೆರವನ್ನು ನೀಡುತ್ತಿವೆ. ಆದರೆ ಸ್ವಯಂ ಉದ್ಯೋಗ ಸ್ಥಾಪಿಸುವ ಯುವಜನರು ತಮ್ಮ ಸ್ವಯಂ ಉದ್ಯೋಗ ಸ್ಥಾಪಿಸುವ ಯೋಜನೆಯ ಬಗ್ಗೆ ವಿಸ್ತೃತ ಮಾಹಿತಿಯನ್ನು ಹೊಂದಿರಬೇಕು. ಸಾಲ ಮರುಪಾವತಿ ಮಾಡುವ ವ್ಯಕ್ತಿತ್ವವನ್ನು ಸಹ ಬೆಳೆಸಿಕೊಳ್ಳುವುದು ಅವಶ್ಯವಿದೆ ಎಂದು ಹೇಳಿದರು.
 
ಸಾಧನಾ ಪೋಟೆ ಮಾತನಾಡಿದರು. ವಾರ್ತಾ ಇಲಾಖೆ ಉಪನಿರ್ದೇಶಕ ಬಸವರಾಜ ಕಂಬಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯ ಉಪನಿರ್ದೇಶಕ ಬಸವರಾಜ ಎಚ್. ವಂದಿಸಿದರು. ಸುರೇಶ ವಾಘಮೇಡೆ ನಿರೂಪಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT