ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಒತ್ತಾಯ

Last Updated 5 ಸೆಪ್ಟೆಂಬರ್ 2013, 5:54 IST
ಅಕ್ಷರ ಗಾತ್ರ

ರಾಯಚೂರು: ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸಬೇಕು ಹಾಗೂ ಪರಿಶಿಷ್ಟ ಜಾತಿಗಳ ಅಭಿವೃದ್ಧಿಗೆ ಏಕಗವಾಕ್ಷಿ ಯೋಜನೆ ಜಾರಿಗೊಳಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಎನ್.ಮೂರ್ತಿ ಬಣ) ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ ಸಾಮಾಜಿಕ ನ್ಯಾಯ ಸಂಕಲ್ಪ ರ‌್ಯಾಲಿ ನಡೆಸಿದರು.

ಮಧ್ಯಾಹ್ನ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಕಚೇರಿಯವರೆಗೆ ರ‌್ಯಾಲಿ ಮೂಲಕ ತೆರಳಿ ನಂತರ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಖಾಸಗಿ ಔದ್ಯೋಗಿಕ ಕ್ಷೇತ್ರದಲ್ಲಿ ಪರಿಶಿಷ್ಟರಿಗೆ ಶೇ 25ರಷ್ಟು ಮೀಸಲಾತಿ ಕಲ್ಪಿಸಬೇಕು, ಪರಿಶಿಷ್ಟರ ಜನಸಂಖ್ಯೆಯ ಆಧಾರಿಸಿ ಶೇ 25ರಷ್ಟು ಮೀಸಲಾತಿ ಹಾಗೂ ಬಜೆಟ್‌ನಲ್ಲಿ ಹಣ ಒದಗಿಸಬೇಕು, ರಾಜ್ಯಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ 1.50 ಲಕ್ಷ ಹುದ್ದೆಗಳು ಹಾಗೂ ಬ್ಯಾಕ್‌ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಬೋಗಸ್ ಜಾತಿ ಪ್ರಮಾಣ ಪತ್ರ ನೀಡಿ ಪರಿಶಿಷ್ಟರ ಉದ್ಯೋಗ ಕಬಳಿಸಿದ 16ಸಾವಿರ ಪ್ರಕರಣಗಳ ತನಿಖೆಗೆ ವಿಶೇಷ ನ್ಯಾಯಾಲಯ ರಚನೆ ಮಾಡಬೇಕು ಹಾಗೂ ಪರಿಶಿಷ್ಟ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಸತಿನಿಲಯದ ವಿದ್ಯಾರ್ಥಿ ವೇತನ ಹೆಚ್ಚಳ ಮಾಡಬೇಕು, ವಸತಿನಿಲಯಗಳ ಸ್ವಂತ ಕಟ್ಟಡ ನಿರ್ಮಾಣ ಮಾಡಬೇಕು ಎಂಬುದು ಸೇರಿದಂತೆ ಅನೇಕ ಬೇಡಿಕೆ ಈಡೇರಿಸಬೇಕು ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ನಂಜಲದಿನ್ನಿ,ಕಾರ್ಮಿಕ ಜಿಲ್ಲಾ ಘಟಕ ಅಧ್ಯಕ್ಷ ಧರ್ಮರಾಜ್ ಶಕ್ತಿನಗರ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದ್ದಾರೆ.

ಸಂಘಟನೆಯ ಪದಾಧಿಕಾರಿಗಳಾದ ರಂಗಪ್ಪ ಕೋತಿಗುಡ್ಡ, ತಿಮ್ಮಣ್ಣ ಅಲಬನೂರು, ಬಸವರಾಜ ಕಂದಗಲ್, ಮರಿಸ್ವಾಮಿ ಪೂಜಾರಿ, ಅಂಬಣ್ಣ ಬೆನಕನಾಳ,ಬಾಲಪ್ಪ ಕಾಕರಗಲ್, ದುರುಗಪ್ಪ ಡಬ್ಬೇರು ಮಡಗು, ಮೌನೇಶ ಕೊನೆಮನಿ, ಆಂಜನೇಯ ಮುರಾರಿ,ಪ್ರಕಾಶಪ್ಪ ಸಿರವಾರ ಹಾಗೂ ಇತರರು ರ‌್ಯಾಲಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT