ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದೃಢ ಸಮಾಜದಿಂದ ದೇಶದ ಏಳ್ಗೆ: ಬೋಪಯ್ಯ

Last Updated 2 ಜನವರಿ 2012, 9:00 IST
ಅಕ್ಷರ ಗಾತ್ರ

ನಾಪೋಕ್ಲು: ಸದೃಢ- ಸಂಘಟಿತ ಸಮಾಜದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ವಿಧಾನಸಭಾ ಅಧ್ಯಕ್ಷ ಕೆ.ಜಿ. ಬೋಪಯ್ಯ ಹೇಳಿದರು.

ಸಮೀಪದ ಕೊಳಕೇರಿ ಗ್ರಾಮದ ಚಪ್ಪೆಂಡಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ  ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಮಾಜಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಕನಸಿನಂತೆ 2020ರ ವೇಳೆಗೆ ದೇಶವನ್ನು ಅಭಿವೃದ್ಧಿ ಪಡಿಸಬೇಕಿದೆ. ಸರ್ಕಾರ ರೂ. 4000 ಕೋಟಿ ಹಣ ಶಿಕ್ಷಣಕ್ಕೆ ಮೀಸಲಿಟ್ಟಿವೆ. ಹಲವು ಯೋಜನೆಗಳ ಮೂಲಕ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಕಾರ್ಯಕ್ರಮ ಹಮ್ಮಿಕೊಂಡಿದೆ. ಪ್ರಾಥಮಿಕ ಶಿಕ್ಷಣದ ಅಭಿವೃದ್ಧಿಗೆ ಎಲ್ಲ ಸರ್ಕಾರಿ ಶಾಲೆಗಳಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಉತ್ತಮ ಪಡಿ ಸಲು ಹಂತ ಹಂತವಾಗಿ ಬದಲಾವಣೆ ತರಲಾಗುವುದು ಎಂದರು.

ಎಸ್‌ಡಿಎಂಸಿ ಅಧ್ಯಕ್ಷ ಕೆ.ಎಚ್ ಉಮ್ಮರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದಕ್ಕೂ ಮೊದಲು ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಕಳ್ಳೀರ ಕಾಂತಿ ಬೆಳ್ಯಪ್ಪ ಶಾಲೆಯ ಕಿರು ಗ್ರಂಥಾಲಯ ಉದ್ಘಾಟಿಸಿದರು. ಜಿ.ಪಂ ಸದಸ್ಯೆ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ನೂತನವಾಗಿ ನಿರ್ಮಿಸಿದ ಧ್ವಜಸ್ತಂಭ ಉದ್ಘಾಟಿಸಿದರು.

ತಾ.ಪಂ. ಅಧ್ಯಕ್ಷೆ ಹೊಸಮನೆ ಕವಿತಾ ಪ್ರಭಾಕರ್, ತಾ.ಪಂ. ಸದಸ್ಯೆ ಕಾಂಡಂಡ ಪ್ರತೀಜಾ ಅಚ್ಚಪ್ಪ, ನಾಪೋಕ್ಲು ಗ್ರಾ.ಪಂ. ಉಪಾಧ್ಯಕ್ಷೆ ಕಲ್ಯಾಟಂಡ ಸುಮಿತ್ರಾ ದೇವಯ್ಯ, ಪಿಎಲ್‌ಡಿ ಬ್ಯಾಂಕ್ ರಾಜ್ಯ ನಿರ್ದೇಶಕ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಕೇಟೋಳಿರ ಹರೀಶ್ ಪೂವಯ್ಯ, ಶಿವಚಾಳಿಯಂಡ ಜಗದೀಶ್ ಕ್ಷೇತ್ರ ಶಿಕ್ಷಣಾಧಿಕಾರಿ ವಿ. ಶ್ರಿಧರನ್ ಇದ್ದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT