ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಗ್ರತೆಗೆ ಶ್ರಮಿಸುತ್ತಿರುವ ಆರ್‌ಎಸ್‌ಎಸ್

Last Updated 14 ಜನವರಿ 2012, 10:00 IST
ಅಕ್ಷರ ಗಾತ್ರ

ಹಿರೇಕೆರೂರ: ಭಾರತ ದೇಶದ ಪ್ರಸ್ತುತ ಬಹಳ ಸ್ಥಿತಿಯು ಶೋಚನೀಯವಾಗಿದೆ. ದೇಶದ ಸಮಗ್ರತೆ ಹಾಗೂ ಹಿಂದೂ ಧರ್ಮದ ರಕ್ಷಣೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ನಿರಂತರವಾಗಿ ಶ್ರಮಿಸುತ್ತಿದೆ ಎಂದು ಧಾರವಾಡ ಲೋಕಸಭಾ ಸದಸ್ಯ ಪ್ರಹ್ಲಾದ ಜೋಶಿ ಹೇಳಿದರು.

ಹಿಂದೂ ಶಕ್ತಿ ಸಂಗಮ ಕಾರ್ಯಕ್ರಮದ ಪ್ರಯುಕ್ತ ಪಟ್ಟಣದ ಬಯಲು ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದ ಅವರು, ಹಿಂದೂ ಧರ್ಮ ಯಾವುದೇ ಧರ್ಮವನ್ನು ದ್ವೇಷಿಸುವುದಿಲ್ಲ. ಅದು ಇಡೀ ಭಾರತ ದೇಶದ ಸಮಗ್ರತೆಗೆ ಶ್ರಮಿಸುತ್ತಿದೆ. ರಾಷ್ಟ್ರ ಭಾವೈಕ್ಯತೆಯೇ ರಾಷ್ಟ್ರೀಯ ಸಂ್ವಯಂ ಸೇವಾ ಸಂಘದ ಗುರಿಯಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ಹುಬ್ಬಳ್ಳಿಯಲ್ಲಿ ನಡೆಯುವ ಹಿಂದೂ ಶಕ್ತಿ ಸಂಗಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಸೇವಕರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿಕೊಂಡರು.

ಕಾಡಾ ಅಧ್ಯಕ್ಷ ಸೋಮಣ್ಣ ಬೇವಿನಮರದ ಮಾತನಾಡಿ, ಹಿಂದೂ ಶಕ್ತಿ ಸಂಗಮ ಆರ್‌ಎಸ್‌ಎಸ್ ಈ ಭಾಗದಲ್ಲಿ ಸಂಘಟಿದ ಶತಮಾನದ ಬಹುದೊಡ್ಡ ಕಾರ್ಯಕ್ರಮವಾಗಿದೆ. ಈ ಕಾರ್ಯಮಕ್ಕೆ ಜಿಲ್ಲೆ ಯಿಂದ ಮನೆಗೆ ಒಬ್ಬರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಕನಿಷ್ಠ ಎರಡು ಸಾವಿರ ಗಣ ವೇಷಧಾರಿಗಳು ಜಿಲ್ಲೆಯಿಂದ ಭಾಗವಹಿಸಲಿದ್ದು, ಶಿಸ್ತು ಮತ್ತು ಸಂಯಮಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಆರ್‌ಎಸ್‌ಎಸ್ ಪ್ರಮುಖರಾದ ಸತೀಶ ಹೊಳಬಾಗಿಲ, ಹಾವನೂರ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಪಾಲಾಕ್ಷಗೌಡ ಪಾಟೀಲ, ಜಿ.ಪಂ. ಸದಸ್ಯ ಬಸವರಾಜ ಬೇವಿನಹಳ್ಳಿ, ನಿಂಗಪ್ಪ ಚಳಗೇರಿ, ಗಂಗಾಧರ ಮಲೇಬೆನ್ನೂರ ವೇದಿಕೆಯಲ್ಲಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT