ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮರ್ಥನೆ ಒದಗಿಸಲು ಗೃಹ ಸಚಿವಾಲಯಕ್ಕೆ ನಿರ್ದೇಶನ

Last Updated 8 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಇಲಾಖೆಯ ಅಧಿಕಾರಿಗಳ ವಿರುದ್ಧ ಇರುವ ಭ್ರಷ್ಟಾಚಾರ ಪ್ರಕರಣಗಳು ಹಾಗೂ ಸಂಸ್ಥೆಯ ಮಹಿಳಾ ಅಧಿಕಾರಿಗಳ ಮೇಲೆ ನಡೆದಿರುವ ಲೈಂಗಿಕ ಕಿರುಕುಳಗಳ ಕುರಿತು ಮಾಹಿತಿ ನೀಡಲು ಒಪ್ಪದ ಗುಪ್ತಚರ ಸಂಸ್ಥೆಯಿಂದ ಕೇಂದ್ರ ಮಾಹಿತಿ ಆಯೋಗವು (ಸಿಐಸಿ) ಅದಕ್ಕಾಗಿ ವಿವರಣೆ ಕೇಳಿದೆ.

ಈ ಸಂಬಂಧ 10 ದಿನಗಳೊಳಗೆ ಸಮರ್ಥನೆ ನೀಡುವಂತೆ  ಕೇಂದ್ರ ಗೃಹ ಸಚಿವಾಲಯಕ್ಕೆ ಮಾಹಿತಿ ಆಯೋಗವು ನಿರ್ದೇಶಿಸಿದೆ.

ಕಳೆದ 10 ವರ್ಷಗಳಲ್ಲಿ ಇಲಾಖೆಯ ಅಧಿಕಾರಿಗಳಿಂದ ನಡೆದಿರುವ ನಡೆದ ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳ ಬಗ್ಗೆಯೂ ಅರ್ಜಿದಾರರು ಇದೇ ವೇಳೆ ಮಾಹಿತಿ ಕೋರಿದ್ದರು. ಆದರೆ, ಅರ್ಜಿದಾರರ ಕೋರಿರುವ ಮಾಹಿತಿಗಳು ಮಾಹಿತಿ ಹಕ್ಕು ಕಾಯ್ದೆ ಚೌಕಟ್ಟಿಗೆ ಒಳಪಡುವುದಿಲ್ಲ ಎಂದು ಗುಪ್ತದಳ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಹೇಳಿದ್ದರು.

ನಂತರ ಅರ್ಜಿದಾರರು ಇದರ ವಿರುದ್ಧ ಪ್ರಥಮ ಮೇಲ್ಮನವಿ ಪ್ರಾಧಿಕಾರದ ಮೊರೆ ಹೋಗಿದ್ದರು. ಪ್ರಾಧಿಕಾರ ಗುಪ್ತಚರ ಸಂಸ್ಥೆಯ ವಾದ ಎತ್ತಿಹಿಡಿದಿತ್ತು. ಇದಾದ ಮೇಲೆ ಅರ್ಜಿದಾರರು ಸಂಸ್ಥೆಯ ಧೋರಣೆಯನ್ನು ಕೇಂದ್ರ ಮಾಹಿತಿ ಆಯೋಗದಲ್ಲಿ (ಸಿಐಸಿ) ಪ್ರಶ್ನಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT