ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮರ್ಪಕ ಅನುಷ್ಠಾನಕ್ಕೆ ಪ್ರಾಮಾಣಿಕ ಯತ್ನಅಗತ್ಯ

Last Updated 8 ಜೂನ್ 2011, 9:15 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡ ಬೇಕೆಂದು ಲೋಕಸಭಾ ಸದಸ್ಯ ಆರ್. ಧ್ರುವನಾರಾಯಣ್ ಮಂಗಳವಾರ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಉದ್ಯೋಗ ಭರವಸೆ ಯೋಜನೆಯ ಪ್ರಗತಿ ಪರಿಶೀಲಿಸಿ ಮಾತನಾಡಿ, ಕೇಂದ್ರ ಸರ್ಕಾರದ ಮಹತ್ವದ ಯೋಜನೆಯು ಸಮರ್ಪಕವಾಗಿ ನಡೆಯುತ್ತಿಲ್ಲ ಇದಕ್ಕೆ ಪ್ರಮುಖ ಕಾರಣ ಅಧಿಕಾರಿಗಳ ಬೇಜವಾಬ್ಧಾರಿತನ ಎಂದರು. ಈ ಯೋಜನೆಯಲ್ಲಿ ಕೆರೆ ಅಭಿವೃದ್ಧಿಪಡಿಸುವುದು, ಕೃಷಿ ಹೊಂಡ ನಿರ್ಮಾಣ, ತೋಟಗಾರಿಕೆ ಇಲಾಖೆ ಹಾಗೂ ಇತರೆ ಇಲಾಖೆಗಳಡಿ ಅನೇಕ ಕಾರ್ಯಕ್ರಮಗಳನ್ನು ಕೈಗೊಳ್ಳಬಹುದು ಇದರಿಂದ ಸಾರ್ವಜನಿಕರಿಗೆ ಬಹಳ ಅನುಕೂಲವಾಗುತ್ತದೆ ಎಂದು ಹೇಳಿದರು.

 ಈ ಯೋಜನೆಯ ಪ್ರಮುಖ ಉದ್ದೇಶ ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗ ಕಲ್ಪಿಸುವುದು ಮತ್ತು ಕೃಷಿ ಕಾರ್ಮಿಕರಿಗೆ ನಿರಂತರವಾಗಿ ಉದ್ಯೋಗ ದೊರೆಯುವುದರಿಂದ ಅವರು ಬೇರೆಡೆಗೆ ವಲಸೆ ಹೋಗುವುದು ತಪ್ಪುತ್ತದೆ ಎಂದು ತಿಳಿಸಿದರು.

2011-12ನೇ ಸಾಲಿನ ಯೋಜನೆ ಮುಕ್ತಾಯಗೊಳ್ಳಲು ಇನ್ನೂ 9 ತಿಂಗಳು ಇರುವುದರಿಂದ ಈ ಅವಧಿಯಲ್ಲಿ ಶೇಕಡ 80ಕ್ಕೂ ಹೆಚ್ಚಾಗಿ ಸಾಧನೆ ಮಾಡ ಬೇಕೆಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ತಾಲ್ಲೂಕಿನಲ್ಲಿ ಈ ಯೋಜನೆಯನ್ನು ಸಮರ್ಪಕವಾಗಿ ನಿರ್ವಹಿಸಲು ಕಾರ್ಯ ನಿರ್ವಾಹಕ ಅಧಿಕಾರಿ ವಿಫಲರಾಗಿದ್ದಾರೆ, ಇನ್ನು ಮುಂದೆ ಈ ಯೋಜನೆಯ ಅನುಷ್ಠಾನದಲ್ಲಿ ಬೇಜವಾಬ್ಧಾರಿತನ ಪ್ರದರ್ಶಿಸಿದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಈ ಯೋಜನೆಯ ಲೆಕ್ಕ ಪತ್ರಗಳನ್ನು ಸಮರ್ಪಕವಾಗಿ ನಿರ್ವಹಿಸ ಬೇಕು ಎಂದು ಸಲಹೆ ನೀಡಿದರು.
ಚಾಮರಾಜನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ. ರಾಜೇಶ್ವರಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಂಗಳಮ್ಮ, ಜಿ.ಪಂ. ಉಪಾಧ್ಯಕ್ಷ ಜಿ.ಪಿ. ನಾಗೇಂದ್ರ ಹಾಗೂ ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT