ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಸ್ಯೆಗಳಿಗೆ ಸ್ಪಂದಿಸಿ

Last Updated 6 ಜೂನ್ 2011, 8:40 IST
ಅಕ್ಷರ ಗಾತ್ರ

ಮಾಲೂರು: `ಸಾರ್ವಜನಿಕರ ಸಮಸ್ಯೆ ಗಳಿಗೆ ಸ್ಪಂದಿಸಿ. ಈ ನಿಟ್ಟಿನಲ್ಲಿ ಸ್ಥಳ ದಲ್ಲಿಯೇ ಪರಿಹಾರ ದೊರಕಿಸಿ ಕೊಡುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ~ ಎಂದು ತಾ.ಪಂ.ಅಧ್ಯಕ್ಷ ಆರ್.ಆನಂದ್ ತಿಳಿಸಿದರು. 

ಅವರು ತಾಲ್ಲೂಕಿನ ಟೇಕಲ್ ಹೋಬಳಿಯ ಬನಹಳ್ಳಿ ಗ್ರಾ.ಪಂ. ವ್ಯಾಪ್ತಿಯ  ಕ್ಷೇತ್ರನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶನಿವಾರ ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ 59ನೇ ಜನಸ್ಪಂದನ ಕಾರ್ಯಕ್ರದಲ್ಲಿ ಭಾಗವಹಿಸಿ ಮಾತನಾಡಿದರು.

ಗ್ರಾಮೀಣ ಜನತೆಯ ಸಮಸ್ಯೆ ತಪ್ಪಿಸಲು ಆಯಾ ಗ್ರಾಮಗಳಲ್ಲಿಯೇ ಸರ್ಕಾರ ಮಹತ್ತರ ಕಾರ್ಯಕ್ರಮವಾದ ಜನಸ್ಪಂದನಾ ಜಾರಿಗೆ ತಂದಿದೆ. ಇದರ ಯಶಸ್ವಿಗೆ ಪಕ್ಷಬೇಧ ಮರೆತು ಜನಪ್ರತಿನಿಧಿಗಳು ಅಧಿಕಾರಿಗಳೊಂದಿಗೆ ಕೈಜೋಡಿಸಬೇಕಾಗಿದೆ ಎಂದರು.

ಜಿ.ಪಂ ಸದಸ್ಯೆ ರತ್ನಮ್ಮ ನಂಜೇಗೌಡ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಬನಹಳ್ಳಿ ಗ್ರಾ.ಪಂ. ಅಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿದರು.

ತಾ.ಪಂ. ಸದಸ್ಯೆ ನಿರ್ಮಲ ಆಂಜಿನಪ್ಪ, ಟೇಕಲ್ ಗ್ರಾ.ಪಂ.ಅಧ್ಯಕ್ಷ ರಾಮಚಂದ್ರ, ಜಿ.ಪಂ. ಮಾಜಿ ಸದಸ್ಯ ಎಚ್.ಹನುಮಂತಪ್ಪ, ತಾ.ಪಂ. ಮಾಜಿ ಅಧ್ಯಕ್ಷ ಕೆ.ವೈ.ನಂಜೇಗೌಡ, ಮುಖಂಡರಾದ ಮುನಶಾಮಿಗೌಡ, ಬಿ.ಕೆ.ನಾರಾಯಣಸ್ವಾಮಿ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎ.ರಾಮಕೃಷ್ಣಪ್ಪ, ಬಿಇಒ ವೆಂಕಟರಾಮರೆಡ್ಡಿ, ಕೃಷಿ ಸಹಾಯಕ ನಿರ್ದೇಶಕ ರಂಗಸ್ವಾಮಿ, ಜಿ.ಪಂ. ಎಇಇ ಬದರೀನಾಥ್ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT