ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಸ್ಯೆಗಳಿಗೆ ಸ್ಪಂದಿಸಿ: ಮೊಯಿಲಿ

Last Updated 12 ಫೆಬ್ರುವರಿ 2011, 9:25 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿ.ಪಂ.ಗೆ ನೂತನವಾಗಿ ಆಯ್ಕೆಯಾಗಿರುವ  ಸದಸ್ಯರು ಉತ್ತಮ ರೀತಿಯಲ್ಲಿ ಕೆಲಸ ಮಾಡಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಗುಣವನ್ನು ರೂಢಿಸಿಕೊಳ್ಳಬೇಕು ಎಂದು ಕೇಂದ್ರ ಕಾನೂನು ಸಚಿವ ವೀರಪ್ಪ ಮೊಯಿಲಿ ತಿಳಿಸಿದರು.

ನಗರದ ಎಂ.ಜಿ.ರಸ್ತೆಯ ಬಳಿ ಜಿಲ್ಲಾ ಪಂಚಾಯಿತಿ ಸದಸ್ಯೆ ಭರಣಿ ವೆಂಕಟೇಶ್ ಅವರ ಪಂಚಾಯಿತಿ ಕಚೇರಿಯನ್ನು ಗುರುವಾರ ಉದ್ಘಾಟಿಸಿದ ಬಳಿಕ ಮಾತನಾಡಿದರು. 
 ‘ಜನರ ನಂಬಿಕೆಗೆ ಆಘಾತವನ್ನು ಉಂಟು ಮಾಡದೇ ಕಾರ್ಯನಿರ್ವಹಿಸಬೇಕು’ ಎಂದರು.

ಜನರಿಗೆ ಮೂಲಸೌಕರ್ಯ ಕಲ್ಪಿಸುವುದು ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸುವುದು ಪ್ರತಿಯೊಬ್ಬ ಜನಪ್ರತಿನಿಧಿಯ ಕರ್ತವ್ಯ. ಉತ್ತಮ ಆಡಳಿತ ನೀಡಲಿ ಮತ್ತು ಕ್ಷೇತ್ರಕ್ಕೆ ಅನುಕೂಲ ಕಲ್ಪಿಸಲಿ ಎಂಬ ಉದ್ದೇಶದಿಂದ ಜನರು ಚುನಾವಣೆಯ ಮೂಲಕ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡುತ್ತಾರೆ. ಜನಪ್ರತಿನಿಧಿಗಳು ಜನರಿಗೆ ನೆರವಾಗಬೇಕೆ ಹೊರತು ಅವರಿಂದ ದೂರವಾಗಬಾರದು ಎಂದು ಅವರು ತಿಳಿಸಿದರು.

ಭರಣಿ ವೆಂಕಟೇಶ್ ಅವರಿಗೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಶುಭ ಹಾರೈಸಿದರು. ಶಾಸಕ ಎನ್.ಸಂಪಂಗಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆಂಜನಪ್ಪ, ಭರಣಿ ಅವರ ಪತಿ ವೆಂಕಟೇಶ್, ಕಾಂಗ್ರೆಸ್‌ನ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT