ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾಜ ತಿದ್ದುವಲ್ಲಿ ಪತ್ರಿಕಾರಂಗದ ಪಾತ್ರ ಪ್ರಮುಖ

Last Updated 13 ಜೂನ್ 2011, 8:05 IST
ಅಕ್ಷರ ಗಾತ್ರ

ಗೋಕಾಕ: ಸಂವಿಧಾನದ ನಾಲ್ಕನೇ ಅಂಗದಂತೆ ಕಾರ್ಯನಿರ್ವಹಿಸುತ್ತಿರುವ ಪತ್ರಿಕಾರಂಗ ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಭಾನುವಾರ ಇಲ್ಲಿಯ ತಾ.ಪಂ. ಸಭಾ ಭವನದಲ್ಲಿ ಜರುಗಿದ ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಬೆಳಗಾವಿ ಜಿಲ್ಲಾ ಶಾಖೆಯ ಕಾರ್ಯಾಲಯ ಉದ್ಘಾಟನೆಯನ್ನು ನೆರವೇರಿಸಿ, ಪತ್ರಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

`ಉಪವಾಸ, ಧರಣಿ, ಸತ್ಯಾಗ್ರಹ ಹಾಗೂ ಪ್ರತಿಭಟನೆಗಳ ಮೂಲಕ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಸಮಾಜದ ಅಭ್ಯುದಯಕ್ಕೆ ಶ್ರಮಿಸುತ್ತಿರುವ ಇಂದಿನ ಮಾಧ್ಯಮಗಳಿಂದ ಭ್ರಷ್ಟ ವ್ಯವಸ್ಥೆಯನ್ನು ಸರಿಪಡಿಸಲು ಸಾಧ್ಯ~ ಎಂದು ಅವರು ಹೇಳಿದರು.

ಹೊಗಳಿಕೆ ಹಾಗೂ ತೆಗಳಿಕೆಗೆ ಹೆಚ್ಚಿನ ಮಹತ್ವದ ನೀಡದೇ ತಮ್ಮ ಕಾರ್ಯಕ್ಷೇತ್ರದಲ್ಲಿ ಪರಿಶುದ್ಧತೆಯೊಂದಿಗೆ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು. ಸಾಮಾಜಿಕ ವ್ಯವಸ್ಥೆಯ ಬದಲಾವಣೆಗೆ ಪೂರಕವಾಗುವ ವಿಷಯಗಳಿಗೆ ಹೆಚ್ಚಿನ ಮಹತ್ವ ನೀಡಬೇಕು. ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆಯನ್ನು ಶಾಸಕರು ನೀಡಿದರು.

ಸಾನ್ನಿಧ್ಯ ವಹಿಸಿದ್ದ ಹುಕ್ಕೇರಿ ಗುರುಶಾಂತೇಶ್ವರ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಪತ್ರಕರ್ತರು ಆತ್ಮವಿಮರ್ಶೆ ಮಾಡಿಕೊಂಡು ಸಮಾಜದಲ್ಲಿ ಬದಲಾವಣೆಗೆ ಶ್ರಮಿಸಬೇಕು ಎಂದರು.

ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿ, ಭ್ರಷ್ಟ ವ್ಯವಸ್ಥೆಯನ್ನು ಹೋಗಲಾಡಿಸಲು ಮುಂದಾಗಬೇಕು. ಧನಾತ್ಮಕ ವಿಚಾರಗಳನ್ನು ಅಳವಡಿಸಿಕೊಂಡು ನೇರ ಹಾಗೂ ನಿಷ್ಠುರ ವರದಿಗಳಿಗೆ ಹೆಚ್ಚಿನ ಮಹತ್ವ ನೀಡುವಂತೆ ಮನವಿ ಮಾಡಿದರು.

ಜಿ.ಪಂ. ಮಾಜಿ ಉಪಾಧ್ಯಕ್ಷ ಟಿ.ಆರ್.ಕಾಗಲ್, ಮಾಜಿ ಸದಸ್ಯ ಡಾ,ರಾಜೇಂದ್ರ ಸಣ್ಣಕ್ಕಿ ಹಾಗೂ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಟಿಪ್ಪುವರ್ಧನ ಮಾತನಾಡಿ. ಪತ್ರಕರ್ತರ ಸೇವೆಯನ್ನು ಸ್ಮರಿಸಿಕೊಂಡರು.
ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಭಜಂತ್ರಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಎಸ್.ಬಿ. ಧಾರವಾಡಕರ, ಚಂದ್ರಶೇಖರ ಕೊಣ್ಣೂರ, ಸದಾನಂದ ಭಾಮನೆ, ಲಕ್ಷ್ಮಣ ಖಡಕಭಾಂವಿ, ಚೆನ್ನಪ್ಪ ಮಾದರ, ಎಂ.ಎಚ್.ಕಾಳೆ ಮೊದಲಾದವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಹತ್ತಿ, ಕರವೇ ಸ್ಥಳೀಯ ಘಟಕದ ಅಧ್ಯಕ್ಷ ಬಸವರಾಜ ಖಾನಪ್ಪನವರ, ಮೇಡಳ್ಳಿ ನಾಗರಾಜ, ನಾಮದೇವ ಜುಟ್ಟದವರ, ಶ್ರೀಕಾಂತ ತಳವಾರ, ದುರ್ಗಾ ಯರಝರ್ವಿ, ಬಿ.ಎಲ್.ದೇವಮ್ಮ. ಜಲಾಲುದ್ದೀನ್, ಕಿರಣ ಡಮಾಮಗರ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಕಲಾವಿದ ಬಸವರಾಜ ಹಿರೇಮಠ ಪ್ರಾರ್ಥಿಸಿದರು. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾದೇವ ಮಠಪತಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರಮೇಶಗೌಡ ಪಾಟೀಲ ನಿರೂಪಿಸಿದರು. ಸುಭಾಷ ಗಡ್ಕರಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT