ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರಳ ಪಠ್ಯಕ್ಕೆ ಸಿಬಲ್ ಸೂಚನೆ

Last Updated 12 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಶಿಕ್ಷಣದ ಹಕ್ಕು ಕಾಯ್ದೆಯ ಆಶಯಗಳನ್ನು ಗಮನದಲ್ಲಿಟ್ಟುಕೊಂಡು ಪಠ್ಯ ಪುಸ್ತಕಗಳನ್ನು ವಿದ್ಯಾರ್ಥಿಗಳ ವಯೋಮಾನಕ್ಕೆ ಅನುಗುಣವಾಗಿ, ಆದಷ್ಟು ಸರಳವಾಗಿ ರೂಪಿಸುವಂತೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಹಾಗೂ ಶೈಕ್ಷಣಿಕ ಮಂಡಳಿಗಳಿಗೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.

ಈಗಿರುವ ಪಠ್ಯ ಪುಸ್ತಕಗಳು ಸರಳವಾಗಿಲ್ಲ ಎಂದು ಇತ್ತೀಚೆಗೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಕಪಿಲ್ ಸಿಬಲ್ ಕಳವಳ ವ್ಯಕ್ತಪಡಿಸಿದ್ದರು. ಪಠ್ಯ ಕ್ರಮ ಹಾಗೂ ತರಗತಿಗಳಿಗೆ ಶಿಕ್ಷಕರ ಹಾಜರಾತಿ ಸುಧಾರಣೆಗೆ ಒತ್ತು ನೀಡಬೇಕು, ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮಗಳನ್ನು ಹೆಚ್ಚಿಸಬೇಕು ಎಂದು ಸಿಬಲ್ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಸಚಿವಾಲಯದ ಮೂಲಗಳು ಹೇಳಿವೆ.

`ನಾವು ಪಠ್ಯದ ಗುಣಮಟ್ಟ ಹಾಗೂ ಮಾನದಂಡಗಳನ್ನು ನಿರ್ಧರಿಸಬಹುದು. ಆದರೆ ಅಂತಿಮವಾಗಿ ರಾಜ್ಯ ಸರ್ಕಾರಗಳು ಪಠ್ಯಪುಸ್ತಕಗಳನ್ನು ತಯಾರಿಸುತ್ತವೆ. ಅವುಗಳಲ್ಲಿನ ವಿಷಯಗಳು ವಿದ್ಯಾರ್ಥಿಗಳ ಮಯೋಮಾನಕ್ಕೆ ಅನುಗುಣವಾಗಿ ಇಲ್ಲ~ ಎಂದು ಸಿಬಲ್ ಹೇಳಿದ್ದರು.

  5ನೇ ತರಗತಿಯ ಮಕ್ಕಳು ಎರಡನೇ ತರಗತಿಯ ಪುಸ್ತಕಗಳನ್ನು ಓದಲು ಹೆಣಗಾಡುತ್ತಾರೆ. ಅಲ್ಲದೇ ಸರಳವಾದ ಲೆಕ್ಕವೂ ಅವರಿಗೆ ಕಬ್ಬಿಣದ ಕಡಲೆಯಾಗುತ್ತಿದೆ ಎಂಬ ಅಂಶ ಶೈಕ್ಷಣಿಕ ಸಮೀಕ್ಷೆಗಳಿಂದ ತಿಳಿದು ಬಂದ ಹಿನ್ನೆಲೆಯಲ್ಲಿ ಸಚಿವರು ಈ ರೀತಿ ಪ್ರತಿಕ್ರಿಯಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT