ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರಳ ಬದುಕು ಗಾಂಧೀಜಿಗೆ ಸಲ್ಲಿಸುವ ಗೌರವ

Last Updated 3 ಅಕ್ಟೋಬರ್ 2011, 6:25 IST
ಅಕ್ಷರ ಗಾತ್ರ

ದಾವಣಗೆರೆ: ಮಹಿಳೆಯರು ಆಡಂಬರದ ಆಚರಣೆಗೆ ಪ್ರಾಮುಖ್ಯತೆ ಕೊಡದೇ, ಮಹಾತ್ಮ ಗಾಂಧೀಜಿ ಅವರ ಸರಳ ತತ್ವ ಅಳವಡಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಕೆ. ಮಲ್ಲಪ್ಪ ಕರೆ ನೀಡಿದರು.

ನಗರದ ಪೂಜಾ ಇಂಟರ್‌ನ್ಯಾಷನಲ್ ಹೋಟೆಲ್‌ನಲ್ಲಿ ಭಾನುವಾರ ಅಹಲ್ಯಾ ಮಹಿಳಾ ಸಮಾಜದ 11ನೇ ವರ್ಷದ ಪ್ರತಿಭಾ ಪುರಸ್ಕಾರ, ಸನ್ಮಾನ ಮತ್ತು ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ಸ್ವಾವಲಂಬಿ ಆಗಬೇಕು. ಗಾಂಧೀಜಿ ಅವರ ಆರ್ಥಿಕ ತತ್ವ ಅಳವಡಿಸಿಕೊಂಡು ಸಬಲರಾಗಬೇಕು. ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕು ಎಂದರು.

ಸರ್ಕಾರಿ ಪದವಿ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ಎಸ್ ಹೊಳೆಹೊಸೂರ ಮಾತನಾಡಿ, ಮಹಿಳೆಯರೇ ಸಮಾಜದ ಬುನಾದಿ. ಕೇವಲ ಬಾಯಿಮಾತಿನಲ್ಲಿ ಮಹಿಳೆಗೆ ಗೌರವ ನೀಡದೇ, ಆಚರಣೆಯಲ್ಲೂ ಸೂಕ್ತ ಅವಕಾಶ ನೀಡಬೇಕು ಎಂದು ಸಲಹೆ ನೀಡಿದರು.

ಮೇಯರ್ ಎಂ.ಎಸ್. ವಿಠ್ಠಲ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಿಕೊಟ್ಟರು. ಇದೇ ಸಂದರ್ಭದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಕುಲಪತಿ ಡಾ.ಮಹೇಶಪ್ಪ, ಯುಗಧರ್ಮ ರಾಮಣ್ಣ ಮತ್ತು ರೇವಣಸಿದ್ದಯ್ಯ ಅವರನ್ನು ಸನ್ಮಾನಿಸಲಾಯಿತು.

ಅಹಲ್ಯಾ ಮಹಿಳಾ ಸಮಾಜದ ಅಧ್ಯಕ್ಷೆ ಪುಷ್ಪಾ ಆನಂದ್ ಅಧ್ಯಕ್ಷತೆ ವಹಿಸಿದ್ದರು.
ಸಮಾಜದ ಸದಸ್ಯೆಯರು ಪ್ರಾರ್ಥಿಸಿದರು. ಸಂಚಾಲಕಿ ಪ್ರಮೀಳಾ ರಾಮಚಂದ್ರಪ್ಪ ಸ್ವಾಗತಿಸಿದರು. ಕಾರ್ಯದರ್ಶಿ ಆಶಾ ಶ್ರೀನಿವಾಸ್ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT