ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ಅಡ್ಡಿ: ಇಜಾಜ್ ಆರೋಪ

Last Updated 22 ಜನವರಿ 2012, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್/ ವಾಷಿಂಗ್ಟನ್ (ಪಿಟಿಐ): ಮೆಮೊಗೇಟ್ ಹಗರಣದ ರೂವಾರಿ ಪಾಕಿಸ್ತಾನ ಮೂಲದ ಅಮೆರಿಕದ ಉದ್ಯಮಿ ಮನ್ಸೂರ್ ಇಜಾಜ್ ಖಾನ್, ಈ ಪ್ರಕರಣದಲ್ಲಿ ತಾವು ಸುಪ್ರೀಂ  ಕೋರ್ಟ್ ಮುಂದೆ ಸಾಕ್ಷಿ ಹೇಳದಂತೆ ತಡೆಯಲು ಪಾಕಿಸ್ತಾನ ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಪ್ರಕರಣ ಮುಚ್ಚಿ ಹಾಕಲು ಸರ್ಕಾರ ಯತ್ನಿಸುತ್ತಿದೆ. ಸುಪ್ರೀಂ ಕೋರ್ಟ್ ನಿಯೋಜಿಸಿದ ನ್ಯಾಯಾಂಗ ಆಯೋಗದ ಮುಂದೆ ತಾವು ಹೇಳಿಕೆ ನೀಡದಂತೆ ತಡೆಯಲು ಒಳಾಡಳಿತ ಸಚಿವ ರೆಹಮಾನ್ ಮಲಿಕ್ ಸಂಚು ನಡೆಸಿದ್ದಾರೆ. ಪಾಕಿಸ್ತಾನಕ್ಕೆ ಬಂದ ಮೇಲೆ ದೇಶದಿಂದ ಹೊರಹೋಗದಂತೆ ತಡೆಯಲು ಸಂಸದೀಯ ಸಮಿತಿಯ ಮೇಲೆ ಒತ್ತಡ ತಂದಿದ್ದಾರೆ ಎಂದೂ ದೂರಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT