ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ವಿರುದ್ಧ ಕಾಂಗ್ರೆಸ್ ದಾಳಿ

Last Updated 13 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ಗುಲ್ಬರ್ಗ: “ಅಭಿವೃದ್ಧಿಯ ಹೆಸರು ಹೇಳಿಕೊಂಡು ರಾಜ್ಯದ ಖಜಾನೆ ಲೂಟಿ ಮಾಡುತ್ತಿರುವ ಯಡಿಯೂರಪ್ಪ ಸರ್ಕಾರವನ್ನು ಕೆಳಗಿಳಿಸುವ ತನಕ ಕಾಂಗ್ರೆಸ್ ಪಕ್ಷ ವಿರಮಿಸುವುದಿಲ್ಲ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯಘೋಷಿಸಿದರು.

“ರೈತರ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸಿದ ಯಡಿಯೂರಪ್ಪ ಬರೀ ಭ್ರಷ್ಟಾಚಾರದಲ್ಲೇ ಮುಳುಗಿದ್ದಾರೆ.ಅವರ ಪಾಪದ ಕೊಡ ತುಂಬಿದೆ. ಇಷ್ಟರಲ್ಲೇ ಮಧ್ಯಂತರ ಚುನಾವಣೆ ನಡೆಯುವುದು ಖಚಿತವಾಗಿದ್ದು, ಕಾರ್ಯಕರ್ತರು ಚುನಾವಣೆ ಎದುರಿಸಲು ಸಿದ್ಧರಾಗಬೇಕು” ಎಂದು ಅವರು ಕರೆ ನೀಡಿದರು.

ನಗರದ ಎನ್.ವಿ. ಮೈದಾನದಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ವಿಭಾಗ ಮಟ್ಟದ ‘ನಾಡರಕ್ಷಣೆಗೆ ಬೃಹತ್ ಪ್ರತಿಭಟನಾ ಸಮಾವೇಶ’ದಲ್ಲಿ ಮಾತನಾಡಿದ ಸಿದ್ಧರಾಮಯ್ಯ, “ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರ ವಹಿಸಿಕೊಂಡ ದಿನದಿಂದ ಈವರೆಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಭ್ರಷ್ಟಾಚಾರ ನಡೆದಿದೆ  ಎಂದು ಆರೋಪಿಸಿದರು.

ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ ಮಾತನಾಡಿ, ಪ್ರತ್ಯೇಕ ಕೃಷಿ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ  ಹೇಳುತ್ತಿರುವುದು ಪ್ರಚಾರ ತಂತ್ರ ಎಂದರು.  ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್, ಆರ್.ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ, ಶಾಸಕ ಖಮರುಲ್ ಇಸ್ಲಾಂ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT