ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ಸೌಲಭ್ಯ ಸದುಪಯೋಗವಾಗಲಿ

Last Updated 6 ಜುಲೈ 2012, 4:30 IST
ಅಕ್ಷರ ಗಾತ್ರ

ಹೊಸಪೇಟೆ: ನಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವುದು ನಮ್ಮ ಕೈಯಲ್ಲಿಯೇ ಇದೇ, ಸರ್ಕಾರದ ಸೌಲಭ್ಯಗಳನ್ನು ಸರಿಯಾಗಿ ಬಳಕೆ ಮಾಡಿಕೊಂಡು ದೇಶದ ಪ್ರಗತಿಗೆ ಶ್ರಮಿಸುವಂತೆ ಹೊಸಪೇಟೆ ನಗರಸಭೆ ಅಧ್ಯಕ್ಷ ಎಂ. ಅಮ್ಜದ್ ವಿದ್ಯಾರ್ಥಿಗಳಿಗೆ ತಿಳಿಸಿದರು.

ಹೊಸಪೇಟೆಯ ಸರ್ದಾರ ಪಟೇಲ್ ಸ್ಮಾರಕ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ `ಶಾಲೆಗಾಗಿ ನಾವು ನೀವು~ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸಕ್ತ ವರ್ಷ ಅನುಷ್ಠಾನಕ್ಕೆ ಬಂದ ಮಕ್ಕಳ ಶಿಕ್ಷಣದ ಹಕ್ಕು ಕಾಯಿದೆಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ ಯೋಜನೆಯ ಸದುಪಯೋಗ ಪಡೆದು ಕೊಳ್ಳಲು ಸಲಹೆ ನೀಡಿದರು.

ನಗರಸಭಾ ಸದಸ್ಯ ಟಿ.ಸೋಮಪ್ಪ, ನಾಮ ನಿರ್ದೇಶಿತ ಸದಸ್ಯೆ ಪದ್ಮಾವತಿ, ಕ್ಷೇತ್ರ ಸಮನ್ವಯಾಧಿಕಾರಿ ಚನ್ನಬಸಪ್ಪ ಅಶೋಕ ಜೀರೆ,  ಮುಖ್ಯ ಶಿಕ್ಷಕಿ ಶಾಹೀದಾ ಬೇಗಂ, ರಮೇಶಬಾಬು ಹಾಜರಿದ್ದರು.
ಎಸ್‌ಡಿಎಂಸಿ ಅಧ್ಯಕ್ಷ ಕುಮಾರ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.

ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ ಅನಂತಶಯನಗುಡಿ, 82 ಡಣಾಪುರ, ಕೆ.ಆರ್.ನಾಯ್ಡು ಸರ್ಕಾರಿ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಬಸವನದುರ್ಗ ಸೇರಿದಂತೆ ನಗರದ ಅನೇಕ ಸರ್ಕಾರಿ ಶಾಲೆಗಳು ಸೇರಿದಂತೆ `ಶಾಲೆಗಾಗಿ ನಾವು-ನೀವು~ ಕಾರ್ಯಕ್ರಮ ಆಚರಿಸಿದರು.ಇದಕ್ಕೂ ಮುಂಚೆ ವಿದ್ಯಾರ್ಥಿ ಗಳಿಂದ ನಗರದಲ್ಲಿ ಜಾಥಾ ಕಾರ್ಯ ಕ್ರಮ ಜರುಗಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT