ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಸರ್ಕಾರಿ ಔಷಧ ಘಟಕ ಸ್ಥಾಪನೆ'

Last Updated 5 ಸೆಪ್ಟೆಂಬರ್ 2013, 5:51 IST
ಅಕ್ಷರ ಗಾತ್ರ

ಮಾನ್ವಿ: ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಔಷಧಿಗಳನ್ನು ಎಲ್ಲ ವರ್ಗದ ಜನರಿಗೆ ದೊರಕಿಸುವ ನಿಟ್ಟಿನಲ್ಲಿ ಸರ್ಕಾರವತಿಯಿಂದಲೇ ಪ್ರತಿ ತಾಲ್ಲೂಕಿನಲ್ಲಿ ಸರ್ಕಾರಿ ಔಷಧಿ ಘಟಕಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮದನಗೋಪಾಲ್ ಹೇಳಿದರು.

ಬುಧವಾರ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ್ದ ಅವರು ಆಸ್ಪತ್ರೆಯ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರತಿ ಜಿಲ್ಲೆಯಲ್ಲಿ ಒಂದು ಡಯಾಲಿಸಿಸ್ ಕೇಂದ್ರ ಸ್ಥಾಪನೆಗೆ ನಿರ್ಧರಿಸಲಾಗಿದ್ದು ರಾಯಚೂರು ಜಿಲ್ಲೆಯಲ್ಲಿ ಲಿಂಗಸುಗೂರಿನಲ್ಲಿ ಸ್ಥಾಪಿಸಲಾಗುವುದು. ರಾಜ್ಯದಲ್ಲಿ ವೈದ್ಯರ ಕೊರತೆಯಿದೆ. ಕಾರಣ ವೈದ್ಯಕೀಯ ಪದವೀಧರರು ಕಡ್ಡಾಯವಾಗಿ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುವ  ನಿಟ್ಟಿನಲ್ಲಿ ಕಾಯ್ದೆ ಜಾರಿಗೊಳಿಸಲಾಗುತ್ತಿದೆ.

ಪ್ರತಿ 60ಸಾವಿರ ಜನಸಂಖ್ಯೆಗೆ ಒಂದು 108 ವಾಹನ ಸೌಲಭ್ಯ ಒದಗಿಸಲಾಗುವುದು. ಅಪೌಷ್ಠಿಕತೆ ನಿವಾರಣೆಗೆ ಸಂಬಂಧಿಸಿದಂತೆ ರಾಯಚೂರು ಜಿಲ್ಲೆಗೆ ಪ್ರತ್ಯೇಕ ಯೋಜನೆ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದರು. ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಕ್ಷಕಿರಣ ಯಂತ್ರ ಖರೀದಿಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿಗೆ ಪ್ರಸ್ತಾವನೆ ಕಳುಹಿಸುವಂತೆ ಅವರು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮೇಶ ಮದ್ಲಾಪುರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ.ಶರಣಪ್ಪ ಬಲ್ಲಟಗಿ, ವೈದ್ಯಾಧಿಕಾರಿಗಳಾದ ಡಾ.ಡಿ.ಶರಣಪ್ಪ ಹಾಗೂ ಡಾ.ವೆಂಕಟೇಶ ಆಚಾರ, ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT