ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಜಿಮ್: ಸಾರ್ವಜನಿಕರಿಗೂ ಮುಕ್ತ

Last Updated 16 ಸೆಪ್ಟೆಂಬರ್ 2013, 6:04 IST
ಅಕ್ಷರ ಗಾತ್ರ

ಮಡಿಕೇರಿ: ಉತ್ತಮ ಕ್ರೀಡಾಪಟುಗಳು ರೂಪುಗೊಳ್ಳಲು ಸುಸಜ್ಜಿತ ಹಾಗೂ ಅತ್ಯಾಧುನಿಕ ಕ್ರೀಡಾಂಗಣ ಅಗತ್ಯ. ಈ ನಿಟ್ಟಿನಲ್ಲಿ ಮಡಿಕೇರಿ ನಗರದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯು ಇಲ್ಲಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಒಳಾಂಗಣ ಕ್ರೀಡಾಂಗಣವನ್ನು ನಿರ್ಮಾಣ ಮಾಡಿದೆ.  

ಇತ್ತೀಚಿನ ದಿನಗಳಲ್ಲಿ ಷಟಲ್ ಬ್ಯಾಡ್ಮಿಂಟನ್ ಕ್ರೀಡೆ ಬಗ್ಗೆ ನಗರದ ಯುವಕರು ಹೆಚ್ಚು ಉತ್ಸಾಹ ತೋರುತ್ತಿದ್ದಾರೆ. ಇದರ ಜೊತೆಗೆ ದೇಹದಾರ್ಢ್ಯತೆ ಬಗ್ಗೆ ಕೂಡ ಆಸಕ್ತಿ ತೋರುತ್ತಿದ್ದಾರೆ.
ಇದನ್ನು ಗಮನದಲ್ಲಿಟ್ಟುಕೊಂಡು ಷಟಲ್ ಬ್ಯಾಡ್ಮಿಂಟನ್ ಹಾಗೂ ವ್ಯಾಯಾಮ ಶಾಲೆ (ಜಿಮ್) ನಿರ್ಮಿಸಲಾಗಿದೆ. ಇಲ್ಲಿ ಕೇವಲ ಕ್ರೀಡಾಪಟುಗಳಿಗೆ ಮಾತ್ರವಲ್ಲದೇ, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೂ ಕೂಡ ಅವಕಾಶ ಕಲ್ಪಿಸಲು ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿ ಸಮಿತಿ ತೀರ್ಮಾನಿಸಿದೆ.

ಲಕ್ಷಾಂತರ ರೂಪಾಯಿ ವಿನಿಯೋಗಿಸಿ ಅತ್ಯಾಧುನಿಕ ಸೌಲಭ್ಯದೊಂದಿಗೆ ಹಲವು ತಿಂಗಳ ಹಿಂದೆಯೇ ಬಳಕೆಗೆ ಸಿದ್ಧವಾಗಿದ್ದ ಒಳಾಂಗಣ ಕ್ರೀಡಾಂಗಣ ಸೂಕ್ತ ರೀತಿಯಲ್ಲಿ ಬಳಕೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರವೇಶ ಪಡೆಯಲು ಇಚ್ಛಿಸುವವರು  ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿರುವ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಲ್ಲಿ ಸೆ.16 ರಿಂದ ಅರ್ಜಿ ಪಡೆಯಬಹುದು.

ಷಟಲ್ ಬ್ಯಾಡ್ಮಿಂಟನ್ ವಿಭಾಗದ ನೋಂದಣಿ ಶುಲ್ಕ: ಪದವಿ ಪೂರ್ವ ಶಿಕ್ಷಣದವರೆಗಿನ ವಿದ್ಯಾರ್ಥಿಗಳಿಗೆ ರೂ 500,  ಸಾರ್ವಜನಿಕರಿಗೆ ರೂ 1000 ಹಾಗೂ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಮಾಸಿಕ ಶುಲ್ಕ ರೂ 200 ನಿಗದಿ ಪಡಿಸಲಾಗಿದೆ. 

ಜಿಮ್ ಶುಲ್ಕ: ಪದವಿವರೆಗಿನ ವಿದ್ಯಾರ್ಥಿಗಳಿಗೆ  ರೂ 400 ಮತ್ತು ಸಾರ್ವಜನಿಕರಿಗೆ ರೂ 750 ಹಾಗೂ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಮಾಸಿಕ ಶುಲ್ಕ ರೂ.300 ನಿಗದಿ ಮಾಡಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿ ಬಾಯಿ ತಿಳಿಸಿದ್ದಾರೆ. 

ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯ ದೂರವಾಣಿ ಸಂಖ್ಯೆ: 08272-2 28985 ಸಂಪರ್ಕಿಸುವಂತೆ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT