ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಶಾಲೆ: ಕೀಳರಿಮೆ ಸಲ್ಲ

Last Updated 8 ಜುಲೈ 2012, 18:30 IST
ಅಕ್ಷರ ಗಾತ್ರ

ಯಲಹಂಕ: `ಮಕ್ಕಳು ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿದ್ದೇವೆಂಬ ಕೀಳರಿಮೆ ಮನೋಭಾವ ತೊರೆದು ಉತ್ತಮ ವಿದ್ಯಾವಂತರಾಗುವ ಮೂಲಕ ಭವಿಷ್ಯದಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಬೇಕು~ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಎ.ರವಿ ಸಲಹೆ ಮಾಡಿದರು.

ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ತಿಂಡ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ಬಿಬಿಎಂಪಿ ಸದಸ್ಯರು ಉಚಿತವಾಗಿ ನೀಡಿದ ನೋಟ್ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಿ ಅವರು ಮಾತನಾಡಿದರು.

`ಸಮಾಜದಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಿರುವ ಅನೇಕ ಗಣ್ಯರು ಸರ್ಕಾರಿ ಶಾಲೆಗಳಲ್ಲಿ ಓದಿದ್ದಾರೆ. ಹಾಗಾಗಿ ಮಕ್ಕಳು ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರದ ಸೌಲಭ್ಯಗಳ ಸದ್ಬಳಕೆಗೆ ಕರೆ ನೀಡಿದರು.
ಬಿಬಿಎಂಪಿ ಸದಸ್ಯೆ ನಂದಿನಿ ಕೆ.ಶ್ರೀನಿವಾಸ್, ಕ್ಷೇತ್ರದ ಬಿಜೆಪಿ ಅಧ್ಯಕ್ಷ ಪಿ.ಕೆ.ರಾಜಗೋಪಾಲ್, ಬಿಜೆಪಿ ನಗರ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಜಿ. ಶ್ರೀನಿವಾಸ್, ಸಮಾಜ ಸೇವಕರಾದ ಚಂದ್ರಶೇಖರ್, ಪಿಳ್ಳಣ್ಣ, ಮುಖ್ಯ ಶಿಕ್ಷಕ ಭೀಮ್‌ರಾವ್ ಇದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT