ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಶಾಲೆಗಳನ್ನು ಬೆಂಬಲಿಸಲು ಸಲಹೆ

Last Updated 19 ಅಕ್ಟೋಬರ್ 2011, 9:10 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ಸರ್ಕಾರಿ ಶಾಲೆಗಳಲ್ಲಿ ಈಗಲೂ ಗುಣಮಟ್ಟದ ಶಿಕ್ಷಣ ನೀಡ ಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೋಷಕರು ಸರ್ಕಾರಿ ಶಾಲೆಗಳನ್ನು ಬೆಂಬಲಿಸಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಸಲಹೆ ನೀಡಿದರು.
ತಾಲ್ಲೂಕಿನ ಆಲವಟ್ಟ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸೈಕಲ್ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.

`ತಾಲ್ಲೂಕಿನ ಶಾಲೆಗಳಲ್ಲಿ ಉತ್ತಮ ಶೈಕ್ಷಣಿಕ ವಾತಾವರಣವಿದೆ. ಕಳೆದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತಾಲ್ಲೂಕಿಗೆ ಜಿಲ್ಲೆಯಲ್ಲಿಯೇ ಉತ್ತಮ ಫಲಿತಾಂಶ ಬಂದಿದೆ. ಸರ್ಕಾರಿ ಶಾಲೆಗಳಲ್ಲಿ ಸೌಲಭ್ಯಗಳ ಕೊರತೆ ಇಲ್ಲ ಎಂದು ವಿವರಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಮಹಮದ್ ಖಲೀಲ್ ಮಾತನಾಡಿ, ಸರ್ಕಾರ ಮಕ್ಕಳ ಕಲಿಕೆಗೆ ಪೂರಕವಾಗಿ ವಿವಿಧ ಸೌಲಭ್ಯ ನೀಡುತ್ತಿದೆ. ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದರು.

ತಾ.ಪಂ.ಅಧ್ಯಕ್ಷ ವೈದ್ಯಂ ವೆಂಕಟರೆಡ್ಡಿ  ಅಧ್ಯಕ್ಷತೆ ವಹಿಸಿದ್ದರು.  ಮುಖ್ಯ ಶಿಕ್ಷಕ ಕೆ.ಎಂ.ಕೃಷ್ಣಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.

ತಾ.ಪಂ. ಉಪಾಧ್ಯಕ್ಷ ಆಂಜಪ್ಪ, ಸದಸ್ಯ ಬಂಡಪಲ್ಲಿ ಕೃಷ್ಣಾರೆಡ್ಡಿ, ಗ್ರಾ.ಪಂ. ಅಧ್ಯಕ್ಷ ಮುನಿವೆಂಕಟಪ್ಪ, ಸದಸ್ಯ ಗಣೇಶ್, ಮುಖಂಡರಾದ ಚಂದ್ರಾರೆಡ್ಡಿ, ಬಿ.ವಿ.ವೆಂಕಟಾಚಲಪತಿ, ಕೊಟ್ರಗುಳಿ ವೆಂಕಟರಾಮರೆಡ್ಡಿ, ನಾರಾಯಣರೆಡ್ಡಿ, ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶಿಕ್ಷಕರಾದ ಆರ್.ಬಿ.ಸುಬ್ರಮಣಿ ಸ್ವಾಗತಿಸಿದರು. ಶ್ರೀನಿವಾಸರೆಡ್ಡಿ ವಂದಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT