ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಸರ್ಕಾರಿ ಸಿಬ್ಬಂದಿ ರಾಜಕೀಯ ಪಕ್ಷಗಳಿಂದ ದೂರವಿರಿ'

Last Updated 3 ಏಪ್ರಿಲ್ 2013, 6:24 IST
ಅಕ್ಷರ ಗಾತ್ರ

ಶಿರಹಟ್ಟಿ: ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತರು ಅಥವಾ ಸರ್ಕಾರಿ ಅಡಿ ಕೆಲಸ ಮಾಡುವ ವ್ಯಕ್ತಿಗಳು ಚುನಾವಣಾ ಸಮಯದಲ್ಲಿ ಯಾವುದೇ ಪಕ್ಷದಲ್ಲಿ ಗುರುತಿಸಿಕೊಂಡು ಕಾರ್ಯ ನಿರ್ವಹಿಸಿದರೆ ಅವರ ವಿರುದ್ಧ  ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ತುರುಮರಿ ಹೇಳಿದರು.

ಮಂಗಳವಾರ ಪಟ್ಟಣದ ಜ. ಫಕೀರೇಶ್ವರ ಸಮುದಾಯ ಭವನದಲ್ಲಿ ವ್ಯವಸ್ಥಿತ ಮತದಾನ ಶಿಕ್ಷಣ ಮತ ದಾನದಲ್ಲಿ ಭಾಗವಹಿಸುವಿಕೆ ತರಬೇತಿ ಶಿಬಿರದಲ್ಲಿ  ಪಾಲ್ಗೊಂಡು ಮಾತನಾ ಡಿದರು. ಮಸೀದಿ, ಚರ್ಚ್ ಮತ್ತು ದೇವಸ್ಥಾನಗಳಲ್ಲಿ ರಾಜಕೀಯ ಸಭೆ ಸಮಾರಂಭಗಳಿಗೆ ಅವಕಾಶವಿಲ್ಲ. ಮತದಾರರು  ನಿರ್ಭಯ ಮತ್ತು ಯಾವುದೇ ಒತ್ತಡಕ್ಕೆ ಮಣಿಯದೇ ಮತ ಹಾಕುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿಬೇಕು. ಮತದಾರರು ಮತದಾನ ಎಂಬ ಪವಿತ್ರ ಕಾರ್ಯದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಪಾಂಡುರಂಗ ನಾಯಕ್ ಮಾತನಾಡಿ, ಮತದಾನದಲ್ಲಿ ಪಾಲ್ಗೊಳ್ಳುವಿಕೆ ಬಹಳ ಮುಖ್ಯ. ಎಲ್ಲರಿಗೂ ಜಾಗೃತಿ ಮೂಡಿಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ. ಚುನಾವಣೆಯ ಸಂದೇಶ ಮತ್ತು ಪ್ರಜಾಪ್ರಭುತ್ವದ ಬಗ್ಗೆ ತಿಳಿವಳಿಕೆ ಮೂಡಬೇಕು ಎಂದರು.

ಸಹಾಯಕ ಚುನಾವಣಾಧಿಕಾರಿ ಆರ್.ಡಿ. ಉಪ್ಪಿನ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿರಹಟ್ಟಿ ವಿಧಾನ ಸಭಾ ಮತಕೇತ್ರದ ಚುನಾವಣಾಧಿಕಾರಿ ಟಿ. ದಿನೇಶ, ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಲ್. ಹಂಪಣ್ಣ, ನೆಹರೂ ಯುವ ಕೇಂದ್ರದ ಅಧಿಕಾರಿ ರವೀಂದ್ರಭಟ್, ಆರೋಗ್ಯ ಇಲಾಖೆ ಡಾ. ಬಜಂತ್ರಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT