ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಸಿಗಳ ನೆಟ್ಟು ಪರಿಸರ ಉಳಿಸಿರಿ

Last Updated 10 ಜೂನ್ 2011, 9:05 IST
ಅಕ್ಷರ ಗಾತ್ರ

ಬೆಳಗಾವಿ: `ಜಾಗತಿಕ ತಾಪಮಾನ ಹೆಚ್ಚಾಗುತ್ತಿದ್ದು ಪರಿಸರ ಹಾಳಾಗುತ್ತಿದೆ. ಪರಿಸರ ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ~ ಎಂದು ಜಿಲ್ಲಾ ಪ್ರಧಾನ ನ್ಯಾಯಾಧೀಶ ಎಂ.ಎಸ್. ಬಾಲಕೃಷ್ಣ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಅವರು ಮಾತನಾ ಡಿದರು.

`ಪರಿಸರ ಉತ್ತಮ ಸ್ಥಿತಿಯಲ್ಲಿ ಕಾಯ್ದುಕೊಳ್ಳಲು ಸಸಿಗಳನ್ನು ನೆಟ್ಟು ಬೆಳೆಸಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸಬೇಕು~ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ವಲಯ ಅರಣ್ಯಾಧಿಕಾರಿ ಎಸ್.ಸಿ. ಪಾಟೀಲ ಮಾತನಾಡಿ, ಪರಿಸರ ರಕ್ಷಣೆಯ ಕಾರ್ಯದಲ್ಲಿ ಅರಣ್ಯ ಇಲಾಖೆಯ ಜತೆಗೆ ಕೈಜೋಡಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್. ಕಿವಡಸಣ್ಣವರ ಮಾತನಾಡಿ, `ಕಾರ್ಯಕ್ರಮ ಪ್ರಯೋಜನ ಪಡೆದುಕೊಳ್ಳಬೇಕು. ಪರಿಸರ ಕುರಿತು ಹೆಚ್ಚಿನ ಕಾಳಜಿ ವಹಿಸಿ ಮುಂದಿನ ಪೀಳಿಗೆಗೆ ಪರಿಸರ ಸ್ವಚ್ಛವಾಗಿಡಲು ಎಲ್ಲರೂ ಪ್ರಯತ್ನಿಸ ಬೇಕು~ ಎಂದು ಮನವಿ ಮಾಡಿದರು.

ಪ್ರಾಧಿಕಾರ ಕಾರ್ಯದರ್ಶಿ ರವಿ ನಾಯ್ಕ ಸ್ವಾಗತಿಸಿದರು. ಎಚ್.ಆರ್. ರವಿಕುಮಾರ ವಂದಿಸಿದರು.
ನಂತರ ನ್ಯಾಯಾಲಯ ಹಾಗೂ ನ್ಯಾಯಾಧೀಶರ ವಸತಿ ಪ್ರದೇಶ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT