ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಕಾರಿ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ

Last Updated 5 ಅಕ್ಟೋಬರ್ 2012, 19:15 IST
ಅಕ್ಷರ ಗಾತ್ರ

ಬೆಂಗಳೂರು: `ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆ 1997ಕ್ಕೆ ತಿದ್ದುಪಡಿ ತರಲು ಕೂಡಲೇ ಸುಗ್ರೀವಾಜ್ಞೆಯನ್ನು ಹೊರಡಿಸಬೇಕು~ ಎಂದು ರಾಜ್ಯ ಪಟ್ಟಣ ಸಹಕಾರ ಬ್ಯಾಂಕ್‌ಗಳ ಮಹಾಮಂಡಳದ ಅಧ್ಯಕ್ಷ ಎಚ್.ಕೆ.ಪಾಟೀಲ್ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮವು ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ `ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆ 1997ಕ್ಕೆ ಅವಶ್ಯಕ ತಿದ್ದುಪಡಿ~ ಕುರಿತ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ಈ ಕಾಯ್ದೆಗೆ ಫೆಬ್ರುವರಿ 15ರ ಒಳಗೆ ತಿದ್ದುಪಡಿ ತರಬೇಕು. ಇಲ್ಲವಾದರೆ ಕೇಂದ್ರ ಸರ್ಕಾರದ ಆದೇಶವೇ ಅನುಷ್ಠಾನಗೊಳ್ಳುತ್ತದೆ. ಸಹಕಾರಿ ಸಂಘಗಳ ಬಲವರ್ಧನೆಗೆ ಪೂರಕವಾಗುವ ನಿಟ್ಟಿನಲ್ಲಿ ಈ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ~ ಎಂದು ಅಭಿಪ್ರಾಯಪಟ್ಟರು.

ಸಚಿವ ಸಿ.ಎಂ.ಉದಾಸಿ, `ಈ ಕಾಯ್ದೆಯ ತಿದ್ದುಪಡಿ ಹಾಗೂ ಅದರ ಸವಾಲುಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಯುವ ಅಗತ್ಯವಿದೆ. ಸಹಕಾರ ಸಂಸ್ಥೆಗಳ ಬೆಳವಣಿಗೆಗೆ ಪೂರಕವಾಗಿ ಕಾನೂನು ರೂಪಿಸಲು ರಚನಾತ್ಮಕ ಸಲಹೆಗಳು ಬರಬೇಕಿದೆ~ ಎಂದರು.

ಸರ್ಕಾರಕ್ಕೆ ಅನುಭವದ ಕೊರತೆ
`ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕೆಂದು ಸುಪ್ರೀಂಕೋರ್ಟ್ ಆದೇಶ ನೀಡಿದಾಗಲೇ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಬೇಕಾಗಿತ್ತು. ಈ ವಿಚಾರದಲ್ಲಿ ಸರ್ಕಾರಕ್ಕೆ ಅನುಭವದ ಕೊರತೆಯಿದೆ~ ಎಂದು ಎಚ್.ಕೆ.ಪಾಟೀಲ್ ವಿಷಾದ ವ್ಯಕ್ತಪಡಿಸಿದರು.

ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಕೋರ್ಟ್ ತೀರ್ಪು ನೀಡುವ ಮುಂಚೆಯೇ ಸರ್ವಪಕ್ಷ ನಿಯೋಗ ಪ್ರಧಾನಿ ಬಳಿ ಕರೆದೊಯ್ದು ಚರ್ಚಿಸಬೇಕಿತ್ತು. ಕಾನೂನು ಹೋರಾಟದಲ್ಲೂ ಎಡವಿದೆ~ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT