ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಕಾರಿ ಕ್ಷೇತ್ರಕ್ಕೆ ಹಸ್ತಕ್ಷೇಪ ಸಲ್ಲ: ರೇವಣ್ಣ

Last Updated 13 ಫೆಬ್ರುವರಿ 2011, 10:45 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು. ರಾಜಕೀಯ ಹಸ್ತಕ್ಷೇಪ ಮಾಡಿರುವ ಯಾವುದೇ ಸಂಘಗಳಿಗೆ ಉಳಿಗಾಲವಿಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ಅಭಿಪ್ರಾಯಪಟ್ಟರು.

 ತಾಲ್ಲೂಕಿನ ಮಳ್ಳೂರು ಹಾಲು ಉತ್ಪಾದಕರ ಸಹಕಾರ ಸಂಘದ ಬೆಳ್ಳಿ ಮಹೋತ್ಸವವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ‘ರೈತರ ಕಣ್ಣೀರಿಗೆ ಕಾರಣರಾದವರು ಉಳಿಯುವುದಿಲ್ಲ. ರಸಗೊಬ್ಬರ ಕೇಳಿದವರಿಗೆ ಲಾಠಿಯೇಟು ಮತ್ತು ಗುಂಡೇಟು ನೀಡಿದ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸುತ್ತಾರೆ’ ಎಂದರು.
 ಚಿಕ್ಕಬಳ್ಳಾಪುರ ಪ್ರತ್ಯೇಕ ಜಿಲ್ಲೆಯಾಗಿದ್ದರೂ ಇಲ್ಲಿನ ಹೈನುಗಾರಿಕೆ ಮತ್ತು ರೇಷ್ಮೆಯನ್ನು ಅವಲಂಬಿಸಿರುವ ರೈತರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಸೂಕ್ತ ಕಾರ್ಯಯೋಜನೆಯನ್ನು ಹಮ್ಮಿಕೊಂಡಿಲ್ಲ. ಪ್ರತ್ಯೇಕ ಮೆಗಾ ಡೈರಿ ಈ ಭಾಗದ ರೈತರ ಅನುಕೂಲಕ್ಕಾಗಿ ಅತ್ಯವಶ್ಯಕವಾಗಿದೆ. ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ರೂಪುಗೊಳ್ಳಲು ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.

 ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷರುಗಳು, ನಿವೃತ್ತ ನೌಕರರು ಮತ್ತು ಹಾಲಿ ನಿರ್ದೇಶಕರನ್ನು ಸನ್ಮಾನಿಸಲಾಯಿತು. ಹೆಚ್ಚು ಹಾಲು ಸರಬರಾಜು ಮಾಡಿದವರಿಗೆ ಸೈಕಲ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಳ್ಳೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಂ.ಆರ್.ಮಂಜುನಾಥ್‌ಬಾಬು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷ ರಮೇಶ್, ನಿರ್ದೇಶಕರಾದ ಕೆ.ಗುಡಿಯಪ್ಪ, ಕೆ.ವಿ.ನಾಗರಾಜು, ಮಾಜಿ ನಿರ್ದೇಶಕ ಎಂ.ರಾಜಣ್ಣ, ನಿರ್ವಾಹಕ ನಿರ್ದೇಶಕ ಗಜೇಂದ್ರನ್, ಉಪವ್ಯವಸ್ಥಾಪಕ ಡಾ.ಈಶ್ವರಯ್ಯ, ಸಹಾಯಕ ವ್ಯವಸ್ಥಾಪಕ ಬಿ.ಎಸ್.ಹನುಮಂತರಾವ್, ಸಹಕಾರಿ ಯೂನಿಯನ್ ಅಧ್ಯಕ್ಷ ಎಂ.ಆರ್.ಶಿವಣ್ಣ, ಗ್ರಾ.ಪಂ.ಅಧ್ಯಕ್ಷೆ ಜಯಮ್ಮ ಮುನಿನಾಗಪ್ಪ, ಸಹಕಾರಿ ಸಂಘಗಳ ಉಪ ನಿಬಂಧಕ ಶಿವಣ್ಣ, ಸಹಾಯಕ ನಿಬಂಧಕ ವೆಂಕಟಪ್ಪ, ಕೆನರಾ ಬ್ಯಾಂಕ್ ವ್ಯವಸ್ಥಾಪಕ ಬಿ.ಎಸ್.ಹನುಮಂತರಾವ್, ಪಶು ವೈದ್ಯಾಧಿಕಾರಿ ಡಾ.ಗಂಗಾಧರಯ್ಯ, ಹಾಪ್‌ಕಾಮ್ಸ್ ಅಧ್ಯಕ್ಷ ಮುನೇಗೌಡ, ಪಿ.ವಿ.ನಾಗರಾಜ್, ಬಿ.ಎಂ.ಮುನಿಕೃಷ್ಣಪ್ಪ, ತಾ.ಪಂ.ಸದಸ್ಯೆ ರಾಧಿಕಾ, ಮಳ್ಳೂರು ಮಂಜುನಾಥ್, ಹರೀಶ್, ಸಂಘದ ನಿರ್ದೇಶಕರಾದ ಸಿ.ಎಂ.ಶ್ರೀಧರ್, ಎಂ.ಟಿ.ಮುನೇಗೌಡ, ಜಿ.ಕೆ.ಕೆಂಪೇಗೌಡ, ಎಂ.ಆರ್.ಮುನಿಮಲ್ಲಪ್ಪ, ವಿ.ಸುರೇಶ್, ಮುನಿಕೃಷ್ಣಪ್ಪ ಇತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT