ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಕಾರಿ ಬ್ಯಾಂಕ್ ಸಮಸ್ಯೆ ಪರಿಹಾರಕ್ಕೆ ಯತ್ನ

Last Updated 20 ಅಕ್ಟೋಬರ್ 2012, 4:35 IST
ಅಕ್ಷರ ಗಾತ್ರ

ಧಾರವಾಡ: `ಪಟ್ಟಣ ಸಹಕಾರಿ ಬ್ಯಾಂಕುಗಳು ಎದುರಿಸುತ್ತಿರುವ ಆದಾಯ, ನೇರ ತೆರಿಗೆ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಸರ್ವ ಪ್ರಯತ್ನ ಮಾಡಲು ಸಿದ್ಧವಿದೆ~ ಎಂದು ಮುಖ್ಯಮಂತ್ರಿಗಳ ಸಂಸದಿಯ ಕಾರ್ಯದರ್ಶಿ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು.

ಇಲ್ಲಿಗೆ ಸಮೀಪದ ರಾಯಾಪುರದ ಕೆಎಂಎಫ್ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ತರಬೇತಿ ಶಿಬಿರ ಉದ್ಘಾಟಿಸಿದ ಅವರು, `ಸಹಕಾರ ಕ್ಷೇತ್ರವು ಇಂದಿನ ಸ್ಪರ್ಧಾತ್ಮಕ ವ್ಯವಸ್ಥೆಯಲ್ಲಿ ಬೆಳವಣಿಗೆ ಹೊಂದುವ ಅಗತ್ಯ ಇದೆ.
 
ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಹಕಾರಿ ಸಂಸ್ಥೆಗಳು ತೊಡಗಿಸಿಕೊಂಡಿವೆ. ಸರ್ಕಾರ ರೈತರಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳ ವಿತರಣೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಮುಖ್ಯ. ಹಾಗಾಗಿ ಪಟ್ಟಣ ಸಹಕಾರಿ ಬ್ಯಾಂಕುಗಳ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಾಪುಗೌಡ ಪಾಟೀಲ, `ತೆರಿಗೆ ಹೊರೆಯಿಂದ ಸಹಕಾರಿ ಸಂಸ್ಥೆಗಳಿಗೆ ಮುಕ್ತಿ ದೊರೆಯುವ ಅಗತ್ಯ ಇದೆ~ ಎಂದರು. ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಿಂಗರಾಜ ಪಾಟೀಲ, `ಪಟ್ಟಣ ಸಹಕಾರಿ ಬ್ಯಾಂಕುಗಳು ದಕ್ಷತೆಯಿಂದ ಕೆಲಸ ಮಾಡಬೇಕು~ ಎಂದು ಸಲಹೆ ನೀಡಿದರು.

ಪಿ.ರುದ್ರಪ್ಪ ಸ್ವಾಗತಿಸಿದರು. ಐ.ಎಸ್.ಪಾಟೀಲ ವಂದಿಸಿದರು. ಮಾಡಿದರು. ಪಿ.ಪಿ.ಗಾಯಕವಾಡ ಕಾರ್ಯಕ್ರಮ ನಿರೂಪಿಸಿದರು.ತರಬೇತಿ ಕಾರ್ಯಕ್ರಮದಲ್ಲಿ ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಯ ಪಟ್ಟಣ ಸಹಕಾರಿ ಬ್ಯಾಂಕುಗಳ ಅಧ್ಯಕ್ಷರು, ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT