ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಕ್ಷರತಾ ಪ್ರಮಾಣ ಹೆಚ್ಚಿಸಲು ಸಲಹೆ

Last Updated 9 ಸೆಪ್ಟೆಂಬರ್ 2011, 8:30 IST
ಅಕ್ಷರ ಗಾತ್ರ

ಧಾರವಾಡ: `ಗ್ರಾಮೀಣ ಪ್ರದೇಶದ ಸಾಕ್ಷರತಾ ಪ್ರಮಾಣವನ್ನು ಪ್ರಾಮಾಣಿವಾಗಿ ಹೆಚ್ಚಿಸಲು ಶ್ರಮವಹಿಸಿ ಕಾರ್ಯನಿರ್ವಹಿಸಬೇಕು~ ಎಂದು ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ ಹೇಳಿದರು.

ಇಲ್ಲಿನ ಗುರುಭವನದಲ್ಲಿ ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಸಾಕ್ಷರ ದೀಪ ಸಮಿತಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಸಾಕ್ಷರತೆಯ ಮೂಲಕ ಶೋಷಣೆ ರಹಿತ ಸಮಾಜ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಬೇಕು ಎಂದರು.

ಜಿಪಂ ಅಧ್ಯಕ್ಷ ಅಡಿವೆಪ್ಪ ಮನಮಿ ಉದ್ಘಾಟಿಸಿ, ಅಕ್ಷರದ ಮೂಲಕ ಅರಿವು ಮೂಡಿಸಿ ಅನಕ್ಷರಸ್ಥರನ್ನು ಕ್ರಿಯಾಶೀಲರನ್ನಾಗಿ ಮಾಡಬೇಕು. ಸಾಕ್ಷರತೆಯು ದೇಶದ ಅಭಿವೃದ್ಧಿಗೆ ಪೂರಕವಾಗಿದೆ. ಬದುಕಿನ ಶಿಕ್ಷಣ ನೀಡಿ ಸಾಕ್ಷರತಾ ಭಾರತವನ್ನು ಕಟ್ಟಬೇಕು ಎಂದು ಹೇಳಿದರು.

ಶಾಸಕ ಚಂದ್ರಕಾಂತ ಬೆಲ್ಲದ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ಕರಡಿಕೊಪ್ಪ ಮಾತನಾಡಿದರು. ಉಪಾಧ್ಯಕ್ಷೆ ಮಮತಾಜಬಿ ನದಾಫ್, ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದತ್ತಾ ಡೋರ್ಲೆ, ಶಂಕರ ಹಲಗತ್ತಿ, ಜಿಪಂ ಸದಸ್ಯೆ ಪ್ರೇಮಾ ಕೊಮಾರದೇಸಾಯಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಶಿಖಾ, ರುದ್ರಸ್ವಾಮಿ, ಮಮತಾ ನಾಯ್ಕ, ಎ.ಬಿ.ಚಪ್ಪರಬಂದ, ಎಸ್.ಆರ್.ರಾಚಣ್ಣವರ, ಬಿ.ಎಸ್.ಹಂಚಿನಾಳ, ನಾರಾಯಣ ಭಜಂತ್ರಿ, ಜಿ.ವೈ.ಪಡಸುಣಗಿ, ಸಿ.ಎಚ್.ಅದರಗುಂಚಿ ಉಪಸ್ಥಿತರಿದ್ದರು.

ಎಸ್.ಎಂ.ಹುಡೇದಮನಿ ಸ್ವಾಗತಿಸಿದರು. ಬಸವರಾಜ ವಾಸನದ ಮಾತನಾಡಿದರು. ಗುರು ತಿಗಡಿ ನಿರೂಪಿಸಿ, ವೀರಣ್ಣ ವಡ್ಡೀನ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT