ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಧನೆಗೆ ಬಡತನ-ಶ್ರೀಮಂತಿಕೆ ಅಡ್ಡಿಯಾಗದು

Last Updated 18 ಫೆಬ್ರುವರಿ 2012, 10:25 IST
ಅಕ್ಷರ ಗಾತ್ರ

ಲಿಂಗಸುಗೂರ: ಯಾವುದೇ ಒಂದು ಸಾಧನೆಗೆ ಬಡತನ-ಶ್ರೀಮಂತಿಕೆ ಎಂಬುದು ಅಡ್ಡಿಯಾಗದು. ಗುರಿ ತಲುಪಲು ನಿರಂತರ ಸಾಧನೆ ಮೈಗೂಡಿಸಿಕೊಂಡರೆ ಎಂತಹ ಗುರಿಯನ್ನೂ ಸುಲಭವಾಗಿ ಮುಟ್ಟಬಹುದು. ಆ ಎಲ್ಲಾ ಸಾಧನೆಗಳಿಗೆ ಶಿಕ್ಷಣ ಮೆಟ್ಟಿಲಾಗಿ ಕೆಲಸ ಮಾಡಬಲ್ಲದು.

ಕಾರಣ ಪ್ರತಿಯೋರ್ವರು ಶಿಕ್ಷಣವಂತರಾಗುವಂತೆ ಸಹಾಯಕ ಆಯುಕ್ತ ಟಿ. ಯೊಗೇಶ ಕರೆ ನೀಡಿದರು.
ಜ್ಞಾನಗಂಗಾ ಎಜ್ಯುಕೇಷನ್ ಟ್ರಸ್ಟ್‌ನ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಗುರುವಾರ ಮಾತನಾಡಿದರು.

ಶಾಲಾ ಕಾಲೇಜುಗಳು ಮಕ್ಕಳ ಭವಿಷ್ಯ ರೂಪಿಸುವ ದೇವಾಲಯಗಳು. ಈ ನಿಟ್ಟಿನಲ್ಲಿ ಸಂಸ್ಥೆ ಅಧ್ಯಕ್ಷ ಲಕ್ಷ್ಮಿಕಾಂತ ಕುಲಕರ್ಣಿ ಸುಂದರ ವಾತಾವರಣದಲ್ಲಿ ಶಾಲೆ ನಿರ್ಮಿಸಿ ಶಿಕ್ಷಣಕ್ಕೆ ಪೂರಕವಾದ ವಾತಾವರಣ ನಿರ್ಮಿಸಿದ್ದಾರೆ. ಪಾಲಕರು ಕೂಡ ಸಹಕಾರ ನೀಡುವಂತೆ ಸಲಹೆ ಮಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಬಿ. ಮುರಾರಿ, ತಾಲ್ಲೂಕು ಬಿಜೆಪಿ ಅಧ್ಯಕ್ಷ ರಮೇಶ ಜೋಷಿ ಮಾತನಾಡಿ, ಶೈಕ್ಷಣಿಕವಾಗಿ ಹೈದರಾಬಾದ್ ಕರ್ನಾಟಕ ಸಾಕಷ್ಟು ಹಿಂದುಳಿದಿದೆ. ಈ ಪ್ರದೇಶದಲ್ಲಿ ಉನ್ನತ ಹಾಗೂ ಉತ್ತಮ ಶಿಕ್ಷಣ ಸಂಸ್ಥೆಗಳ ಕೊರತೆಯೆ ಈ ಹಿನ್ನಡೆಗೆ ಕಾರಣವಾಗಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಎಲ್ಲಾ ಬಗೆಯ ಶಾಲಾ ಕಾಲೇಜುಗಳನ್ನು ಹುಟ್ಟು ಹಾಕುವ ಮೂಲಕ ಗ್ರಾಮೀಣ ಮಕ್ಕಳಿಗೆ ಅನುಕೂಲ ಕಲ್ಪಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.

ಸಂಸ್ಥೆ ಅಧ್ಯಕ್ಷ ಲಕ್ಷ್ಮಿಕಾಂತ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಬಿ.ಎ. ನಂದಿಕೋಲಮಠ ಉಪಸ್ಥಿತರಿದ್ದರು. ಶಾಲಾ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT