ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಧಿಸುವ ಛಲವಿರಲಿ

Last Updated 12 ಫೆಬ್ರುವರಿ 2012, 19:50 IST
ಅಕ್ಷರ ಗಾತ್ರ

ಯಲಹಂಕ: ಸಾಧಕರಿಗೆ ಉತ್ತಮ ಗುರಿ ಇರಬೇಕು, ಅದನ್ನು ಸಾಧಿಸುವ ಛಲವಿರಬೇಕು. ಈ ಎರಡೂ ಗುಣಗಳನ್ನು ಮೈಗೂಡಿಸಿಕೊಂಡರೆ ಜೀವನದಲ್ಲಿ ಯಶಸ್ಸು ದೊರೆಯಲಿದೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.

ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದೇವೆ ಎಂಬ ಕೀಳರಿಮೆ ಬೇಡ. ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರುವವರು ಹಿಂದೆ ಸರ್ಕಾರಿ ಕಾಲೇಜುಗಳಲ್ಲಿಯೇ ವ್ಯಾಸಂಗ ಮಾಡಿದವರು ಎಂಬುದನ್ನು ಮರೆಯಬಾರದು. ಹಾಗಾಗಿ ಕೀಳರಿಮೆ ತೊರೆದು ಸಾಧನೆಯತ್ತ ಗಮನ ಹರಿಸಬೇಕು ಎಂದರು.

ಈಶಾನ್ಯ ವಿಭಾಗದ ಡಿಸಿಪಿ ಬಿ.ಆರ್.ರವಿಕಾಂತೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಚೌಡಪ್ಪ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ (ಪ್ರಭಾರ) ರಾಜೇಶ್ವರಿ ಅಧ್ಯಕ್ಷತೆ ವಹಿಸಿದ್ದರು.

ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರು ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಇತಿಹಾಸ ಉಪನ್ಯಾಸಕ ಶಿವಣ್ಣ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT