ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಫ್ಟ್‌ವೇರ್‌ ಉದ್ಯೋಗಿ ಮೇಲೆ ಅತ್ಯಾಚಾರ

Last Updated 2 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ತಿರುವನಂತಪುರ (ಪಿಟಿಐ): ಬೆಂಗ­ಳೂರು ಮೂಲದ ಸಾಫ್ಟ್‌ವೇರ್‌ ಉದ್ಯೋಗಿಯೊಬ್ಬರ ಮೇಲೆ ಇಲ್ಲಿಯ ಹಿನ್ನೀರು ಪ್ರದೇಶದ ದ್ವೀಪದಲ್ಲಿರುವ ರೆಸಾರ್ಟ್‌ನಲ್ಲಿ ಅತ್ಯಾಚಾರ ನಡೆದಿದೆ. ಈ ಕೃತ್ಯದಲ್ಲಿ ಪಾಲ್ಗೊಂಡ ಇಬ್ಬರು ವ್ಯಕ್ತಿಗಳಿಗಾಗಿ ಪೊಲೀಸರು ಶೋಧ
ನಡೆಸು­ತ್ತಿದ್ದಾರೆ.

ತನ್ನ ಸಹೋದ್ಯೋಗಿಗಳೊಂದಿಗೆ ಇಲ್ಲಿಗೆ ಸಮೀಪದ ಪೊಳಿಯೂರಿ­ನಲ್ಲಿ­ರುವ ರೆಸಾರ್ಟ್‌ನಲ್ಲಿ ತಂಗಿದ್ದ ಮಹಿಳೆಯ ಮೇಲೆ ನ. 28 ರಂದು ಇಬ್ಬರು ವ್ಯಕ್ತಿಗಳು ಅತ್ಯಾಚಾರ ನಡೆಸಿ­ದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ‘ಇಬ್ಬರು ಅಪರಿಚಿತ ವ್ಯಕ್ತಿಗಳು ಬೆಳಗಿನ ಜಾವ 2.30ಗಂಟೆ ಸುಮಾರಿಗೆ ನಾನು ತಂಗಿದ್ದ ಕೋಣೆ ಪ್ರವೇಶ ಮಾಡಿ ಅತ್ಯಾಚಾರ ನಡೆಸಿದ್ದಾರೆ’ ಎಂದು ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ.

 ಈ ಹೇಳಿಕೆ ಆಧಾರದ ಮೇಲೆ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರೆಸಾರ್ಟ್‌ ಕೋಣೆಯಿಂದ ವಿಧಿ ವಿಜ್ಞಾನ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸಿ, ಪರಿಶೀಲನೆಗೆ ಕಳುಹಿಸಿದ್ದಾರೆ. ಆ ಸಂದರ್ಭದಲ್ಲಿ ರೆಸಾರ್ಟ್‌ನಲ್ಲಿ ತಂಗಿದ್ದ ಅತಿಥಿಗಳ ದೂರವಾಣಿ ಕರೆಯ ವಿವರಗಳನ್ನು ಸಂಗ್ರಹಿಸಿರುವ ಪೊಲೀಸರು ಅಲ್ಲಿಯ ಸಿಬ್ಬಂದಿಯನ್ನೂ ವಿಚಾರಿಸಿದ್ದಾರೆ ಎಂದು ತನಿಖಾ ತಂಡ­ದಲ್ಲಿರುವ ಇನ್‌ಸ್ಪೆಕ್ಟರ್‌ ತಿಳಿಸಿದ್ದಾರೆ.

ತನಿಖೆಗೆ ಆಗ್ರಹ: ಘಟನೆಯ ಕುರಿತು ಕ್ರಿಮಿನಲ್‌ ವಿಚಾರಣೆ ನಡೆಸಬೇಕು ಎಂದು ಸಿಪಿಐ (ಎಂ) ನಾಯಕ ವಿ.ಎಸ್‌.­ಅಚ್ಚುತಾನಂದನ್‌ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT