ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕ ಒಳಿತಿನ ಪ್ರಯತ್ನವೇ ದೇಶಭಕ್ತಿ: ನಾರಾಯಣ ಮೂರ್ತಿ

Last Updated 22 ಸೆಪ್ಟೆಂಬರ್ 2013, 19:45 IST
ಅಕ್ಷರ ಗಾತ್ರ

ಯಲಹಂಕ: ‘ದೇಶಭಕ್ತಿಯೆಂದರೆ ಕೇವಲ ರಾಷ್ಟ್ರಗೀತೆ ಹಾಡುವುದು ಅಥವಾ ತ್ರಿವರ್ಣ ಧ್ವಜ ಹಾರಿಸುವುದಷ್ಟೇ ಅಲ್ಲ. ಸಾರ್ವಜನಿಕವಾಗಿ ಮತ್ತು ಸಾಮಾಜಿಕವಾಗಿ ದೇಶಕ್ಕಾಗಿ ಒಳಿತನ್ನು ಮಾಡುವ ಪ್ರಯತ್ನವೇ ನಿಜವಾದ ದೇಶಭಕ್ತಿ’ ಎಂದು ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥ ಎನ್‌.ಆರ್‌.ನಾರಾಯಣಮೂರ್ತಿ ಹೇಳಿದರು.

ಆವಲಹಳ್ಳಿಯ  ಬಿಎಂಎಸ್‌ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ಬಿಇ, ಎಂಸಿಎ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಬೌದ್ಧಿಕವಾಗಿ ಹಾಗೂ ಹೃದಯಪೂರ್ವಕವಾಗಿ ಕೆಲಸ ಮಾಡುವ ಮೂಲಕ  ವೈಯಕ್ತಿಕವಾಗಿ ಪ್ರಬಲರಾಗುವುದರ ಜೊತೆಗೆ ದೇಶದ ಪ್ರಗತಿಗೆ ಕೊಡುಗೆ ನೀಡಬೇಕು’ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನಿವೃತ್ತ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಕೆ.ಜೈರಾಜ್‌ ಮಾತನಾಡಿ, ಶಿಕ್ಷಣ ಸಂಸ್ಥೆಯಲ್ಲಿ  ಲಭ್ಯವಿರುವ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಪಡಿಸಿಕೊಂಡು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದರು.

ಶಿಕ್ಷಣ ಸಂಸ್ಥೆಯ ಟ್ರಸ್ಟಿಗಳಾದ ಡಾ.ಬಿ.ಎಸ್‌.ರಾಗಿಣಿ ನಾರಾಯಣ್‌, ಡಾ.ಪಿ.ದಯಾನಂದ ಪೈ, ಮುಖ್ಯ ಸಲಹೆಗಾರ ಡಾ.ಎಸ್‌.ಸಿ.ಶರ್ಮ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT