ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳಲು ಸಲಹೆ

Last Updated 22 ಜನವರಿ 2012, 19:30 IST
ಅಕ್ಷರ ಗಾತ್ರ

ಚನ್ನಗಿರಿ:  ಶರಣ ಸಾಹಿತ್ಯ ಅತ್ಯಂತ ಅಮೂಲ್ಯವಾದದ್ದು. ಹೊಸ ಸಮಾಜದ ಸೃಷ್ಟಿ ಬಸವಣ್ಣನ ವಚನಗಳಿಂದ ಮಾತ್ರ ಸಾಧ್ಯ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಗುರುಬಸವ ಸ್ವಾಮೀಜಿ ಪ್ರತಿಪಾದಿಸಿದರು.

ತಾಲ್ಲೂಕಿನ ಪಾಂಡೋಮಟ್ಟಿ ವಿರಕ್ತ ಮಠದಲ್ಲಿ ಭಾನುವಾರ ಸಂಗಮನಾಥ ಸ್ವಾಮೀಜಿ ಹಾಗೂ ಚನ್ನಬಸವ ಸ್ವಾಮೀಜಿ ಅವರ ಸ್ಮರಣೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ಬಸವತತ್ವ ಸಮ್ಮೇಳನದಲ್ಲಿ ಅವರು ಮಾತನಾಡಿದರು.

ಮಾನವೀಯ, ಸಾಮಾಜಿಕ ಕಳಕಳಿ ಹೊಂದುವುದು ಅಗತ್ಯವಾಗಿದೆ. ಅಧ್ಯಾತ್ಮದ ಜತೆಗೆ, ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಬೇಕು. ನಮ್ಮಲ್ಲಿನ ಅರಿವಿನ ಪ್ರಮಾಣವನ್ನು ಹೆಚ್ಚಿಸಿಕೊಳ್ಳಬೇಕು. ಈ ಮಠ ಹಲವಾರು ದಶಕಗಳಿಂದ ನಿರಂತರವಾಗಿ ಬಸವತತ್ವ ಪ್ರಸಾರ ಮಾಡುತ್ತಾ, ಶರಣರ ತತ್ವಗಳ ಅನುಷ್ಠಾನಕ್ಕೆ ಶ್ರಮಿಸುತ್ತಿದೆ ಎಂದು ಹೇಳಿದರು.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಮ್ಮೇಳನ ಉದ್ಘಾಟಿಸಿದರು. ಮಾಜಿ ಶಾಸಕ ಮಹಿಮ ಪಟೇಲ್ ದಿನದರ್ಶಿಕೆ ಬಿಡುಗಡೆ ಮಾಡಿದರು. ಎಂಜಿನಿಯರ್ ಶಂಕರ್ ದೇವನೂರು ಉಪನ್ಯಾಸ ನೀಡಿದರು.

 ಸಾಲುಮರದ ತಿಮ್ಮಕ್ಕಸೇರಿದಮತೆ ಮತ್ತಿತರರು ಉಪಸ್ಥಿತರಿದ್ದರು.

ಚಿಕ್ಕಮಗಳೂರು ಬಸವ ಮಂದಿರದ ಜಯಬಸವಾನಂದ ಸ್ವಾಮೀಜಿ, ಮಾಡಾಳು ನಿರಂಜನ ಪೀಠದ ರುದ್ರಮುನಿ ಸ್ವಾಮೀಜಿ, ಬೆಂಗಳೂರು ಗೋಸಾಯಿ ಮಠದ ಸುರೇಶ್ವರಾನಂದ ಭಾರತೀ ಸ್ವಾಮೀಜಿ ನೇತೃತ್ವ ವಹಿಸಿದ್ದರು.

ಕೆ.ಜಿ. ಶಿವಮೂರ್ತಿ ಸ್ವಾಗತಿಸಿದರು. ಎಂ.ಯು. ಚನ್ನಬಸಪ್ಪ ನಿರೂಪಿಸಿ ಎಂ.ಬಿ. ನಾಗರಾಜ್ ಕಾಕನೂರು ವಂದಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT