ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕವಾಗಿ ಸಬಲರಾಗಲು ಶಿಕ್ಷಣದಿಂದ ಮಾತ್ರ ಸಾಧ್ಯ

Last Updated 20 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲರಾಗಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂಬುದನ್ನು ಅರಿತಿದ್ದ ಜ್ಯೋತಿಬಾ ಪುಲೆ ಅವರು ಶೂದ್ರರು ಶಿಕ್ಷಣ ಪಡೆಯುವಂತೆ ಮಾಡುವಲ್ಲಿ ಯಶಸ್ವಿಯಾದರು~ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಸ್ಮರಿಸಿದರು.

ಬಹುಜನ ಸಮಾಜ ಪಕ್ಷವು ನಗರದಲ್ಲಿ ಸೋಮವಾರ ಆಯೋಜಿಸಿದ್ದ ಜ್ಯೋತಿಬಾ ಪುಲೆ ಅವರ 185ನೇ ಜಯಂತ್ಯುತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ವಿದ್ಯೆಯಿಲ್ಲದೇ ಶೂದ್ರರು ಸಂಪತ್ತು ಮತ್ತು ಬುದ್ದಿ ಎರಡನ್ನು ಕಳೆದುಕೊಂಡರು. ಇಂದು ಹಿಂದುಳಿದ ವರ್ಗದವರು ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿರುವುದೇ ಅವರಿಗೆ ದೊರೆತಿರುವ ಶಿಕ್ಷಣದಿಂದ~ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಬಿ.ಕಮಲನಾಭನ್, ರಾಜ್ಯ ಕಾರ್ಯದರ್ಶಿಗಳಾದ ವಿ.ಮುನಿಸ್ವಾಮಿ, ಚಿಕ್ಕಣ್ಣ , ಹೆಣ್ಣೂರು ಲಕ್ಷ್ಮಿನಾರಾಯಣ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT