ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ಅತ್ಯಾಚಾರ ಖಂಡಿಸಿ ಪ್ರತಿಭಟನೆ

Last Updated 21 ಡಿಸೆಂಬರ್ 2012, 6:05 IST
ಅಕ್ಷರ ಗಾತ್ರ
ಬಳ್ಳಾರಿ: ದೆಹಲಿಯಲ್ಲಿ ಇತ್ತೀಚೆಗೆ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಯನ್ನು ಖಂಡಿಸಿ ನಗರದಲ್ಲಿ ಗುರುವಾರ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.
 
ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಓ), ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್), ಭಾರತೀಯ ವೈದ್ಯಕೀಯ ಸಂಘ (ಐಎಂಎ), ಲಯನೆಸ್ ಕ್ಲಬ್, ಕಂಟೋನ್‌ಮೆಂಟ್ ಲೇಡಿಸ್ ಕ್ಲಬ್, ಪ್ರಸೂತಿ ತಜ್ಞರ ಸಂಘ ಹಾಗೂ ಇತರ ಸಂಘಟನೆಗಳ ಸದಸ್ಯರು ನಗರದ ಗಡಿಗಿ ಚನ್ನಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಘಟನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
 
ದೇಶದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದ್ದು, ಅಪರಾಧಿಗಳು ರಾಜಾರೋಷವಾಗಿ ಓಡಾಡುವಂತಾಗಿದೆ. ಮಹಿಳೆಯರ ಸಬಲೀಕರಣಕ್ಕಾಗಿನ ಕಠಿಣ ಕಾನೂನುಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎಂದು ಎಐಎಂಎಸ್‌ಎಸ್ ಉಪಾಧ್ಯಕ್ಷೆ ಎಂ.ಎನ್.ಮಂಜುಳಾ ದೂರಿದರು.
 
ಸರ್ಕಾರದ ವೈಫಲ್ಯವೇ ಇಂತಹ ಘಟನೆಗಳಿಗೆ ಕಾರಣವಾಗಿದೆ ಎಂದು ಚಿಕ್ಕಮಕ್ಕಳ ತಜ್ಞ ಡಾ.ಯೋಗಾನಂದ ರೆಡ್ಡಿ ಆರೋಪಿಸಿದರು.
ಮಹಿಳೆಯರ ರಕ್ಷಣೆಗಾಗಿರುವ ಕಾನೂನುಗಳು ಇನ್ನಷ್ಟು ಬಲಗೊಳ್ಳಬೇಕು.  ಮಹಿಳೆಯರು ಗೌರವದಿಂದ ಬದುಕುವಂತಾಗಬೇಕು ಎಂದು ಐಎಂಎ ಮಹಿಳಾ ಘಟಕದ ಅಧ್ಯಕ್ಷೆ ಡಾ. ಅರುಣಾರಾವ್ ತಿಳಿಸಿದರು.
 
ಅಸಭ್ಯ ಸಿನಿಮಾಗಳು, ಧಾರಾವಾಹಿಗಳು, ಅಪರಾಧ ಹಿನ್ನೆಲೆಯ ಕಾರ್ಯಕ್ರಮಗಳಿಗೆ ಸರ್ಕಾರ ಪರೋಕ್ಷವಾಗಿ ಬೆಂಬಲ ನೀಡುತ್ತ ಇಂತಹ ದುರ್ಘಟನೆಗಳಿಗೆ ಕಾರಣವಾಗಿರುವುದು ವಿಷಾದನೀಯ. 
 
ಯುವಜನರನ್ನು ಪ್ರಚೋದಿಸುತ್ತಿರುವ ಇಂತಹ ಕಾರ್ಯಕ್ರಮಗಳಿಂದ ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆ ಎಂದು ಎ.ರಾಮಾಂಜನಪ್ಪ ಆರೋಪಿಸಿದರು.
 
ಜಿ.ಎಂ. ವೀರಭದ್ರಯ್ಯ, ಪ್ರಸೂತಿ ತಜ್ಞರ ಸಂಘದ ಡಾ. ಆಶಾಲತಾ, ಡಾ. ಪ್ರಮೋದ್ ಮಾತನಾಡಿದರು. ಡಾ. ಜ್ಯೋತಿ ಪಟೇಲ್, ಡಾ.ಚೇತನಾ, ಡಾ. ಪ್ರಣೀತಾ ಅಜಯ್, ಡಾ. ವಾಣಿ, ಡಾ. ಲಕ್ಷ್ಮಿಪಾವನಿ, ಶಾಂತಾ, ಭುವನಾ, ಉಮೇಶ್, ಗೋವಿಂದ್, ಎರ‌್ರಿಸ್ವಾಮಿ, ಸುರೇಶ್, ಶೋಭಾ, ನಾಗಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.
 
ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಪ್ರತಿಭಟನಾಕಾರರು ಈ ಕುರಿತ ಮನವಿ ಪತ್ರವನ್ನು ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT