ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ರಾಜೀನಾಮೆ

Last Updated 8 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ

ಬೆಂಗಳೂರು: ಬಿ.ಜೆ.ಪುಟ್ಟಸ್ವಾಮಿ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿರುವ ತೀರ್ಮಾನವನ್ನು ಕೈಬಿಡದಿದ್ದರೆ ಯಡಿಯೂರಪ್ಪ ಬೆಂಬಲಿಗ ಸಚಿವರು ಸಾಮೂಹಿಕವಾಗಿ ರಾಜೀನಾಮೆ ನೀಡಲಿದ್ದಾರೆ ಎಂದು ಕೃಷಿ ಸಚಿವ ಉಮೇಶ್ ಕತ್ತಿ ಎಚ್ಚರಿಕೆ ನೀಡಿದ್ದಾರೆ.ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು ಸೋಮವಾರ ಭೇಟಿ ಮಾಡಿ ಈ ಬಗ್ಗೆ ಮನವಿ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

`ಮಂತ್ರಿ, ಶಾಸಕರು ಇಲ್ಲ'
ಬೆಂಗಳೂರು: ಹಾವೇರಿಯಲ್ಲಿ ಭಾನುವಾರ ನಡೆಯುವ ಕೆಜೆಪಿ ಸಮಾವೇಶದಲ್ಲಿ ಸಚಿವರು, ಶಾಸಕರು ಭಾಗವಹಿಸುವುದಿಲ್ಲ ಎಂದು ಕೆಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿ. ಧನಂಜಯಕುಮಾರ್ ತಿಳಿಸಿದರು.

ವಿಧಾನಪರಿಷತ್ ಸದಸ್ಯ ಶಿವರಾಜ ಸಜ್ಜನ ಅವರ ಮನೆಯಲ್ಲಿ ಏರ್ಪಡಿಸಿರುವ ಉಪಾಹಾರ ಕೂಟದಲ್ಲಿ ಯಡಿಯೂರಪ್ಪ ಅವರೊಂದಿಗೆ ಗುರುತಿಸಿಕೊಂಡಿರುವ ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ. ಆದರೆ ಸಮಾವೇಶಕ್ಕೆ ಬರುವಂತೆ ಸೂಚಿಸಿಲ್ಲ ಎಂದರು.

ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ ಅವರನ್ನು ವಜಾ ಮಾಡಿರುವ ಹಿನ್ನೆಲೆಯಲ್ಲಿ ಬಿಎಸ್‌ವೈ ಬೆಂಬಲಿಗ ಸಚಿವರು, ಶಾಸಕರು ಎಚ್ಚರಿಕೆ ಹೆಜ್ಜೆ ಇಡಲಿದ್ದಾರೆ. ಶಿಸ್ತುಕ್ರಮಕ್ಕೆ ಆಸ್ಪದ ನೀಡದ ರೀತಿ ತಂತ್ರಗಳನ್ನು ಅನುಸರಿಸಲಿದ್ದಾರೆ ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT