ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ವಿವಾಹ; ಜಾತ್ರೆಯ ಸಂಭ್ರಮ

Last Updated 22 ಫೆಬ್ರುವರಿ 2011, 16:55 IST
ಅಕ್ಷರ ಗಾತ್ರ

ಕುಷ್ಟಗಿ: ತಾಲ್ಲೂಕಿನ ನಿಡಶೇಸಿ ಗ್ರಾಮದಲ್ಲಿ ಮಂಗಳವಾರ ಚನ್ನಬಸವ ಶಿವಯೋಗಿಗಳ ಪುಣ್ಯತಿಥಿ ಹಾಗೂ ಜಾತ್ರಾ ಮಹೋತ್ಸವ ಸಂಭ್ರಮ ಮತ್ತು ಸಡಗರದಿಂದ ನೆರವೇರಿತು.

ಜಾತ್ರಾ ಮಹೋತ್ಸವದ ಅಂಗವಾಗಿ ಉಚಿತವಾಗಿ ಏರ್ಪಡಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 20 ಜೋಡಿ ವಧುವರರು ವಿವಿಧ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

ಅದಕ್ಕೂ ಮುನ್ನ ನಡೆದ ಚನ್ನಬಸವ ಶಿವಯೋಗಿಗಳ ಅಡ್ಡಪಲ್ಲಕ್ಕಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ನೆರವೇರಿತು.

ಚನ್ನಬಸವೇಶ್ವರ ಮಠದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಚಳಗೇರಿಯ ವಿರೂಪಾಕ್ಷಲಿಂಗ ಶಿವಾಚಾರ್ಯ, ಗಬ್ಬೂರಿನ ಬೂದಿಬಸವ ಸ್ವಾಮೀಜಿ ಹಾಗೂ ಕುಷ್ಟಗಿ ಮದ್ದಾನೇಶ್ವರ ಹಿರೇಮಠದ ಕರಿಬಸವ ಸ್ವಾಮೀಜಿ ಸಾನಿಧ್ಯ ವಹಿಸಿ ನೂತನ ದಂಪತಿಗಳನ್ನು ಆಶೀರ್ವದಿಸಿದರು.  ಶಾಸಕ ಅಮರೇಗೌಡ ಬಯ್ಯಾಪೂರ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಸೇರಿದಂತೆ ಅನೇಕ ರಾಜಕೀಯ ಮುಖಂಡರು, ಪ್ರಮುಖರು ಗ್ರಾಮದ ಗಣ್ಯರು ಭಾಗವಹಿಸಿದ್ದರು.

ಸಂಜೆ ನಡೆದ ಉಚ್ಚಾಯ ಉತ್ಸವದಲ್ಲಿ ನಿಡಶೇಸಿ ಗ್ರಾಮದ ಭಕ್ತರು ಸೇರಿದಂತೆ ಸುತ್ತಲಿನ ಪಟ್ಟಣ ಇತರೆ ಊರುಗಳ ನೂರಾರು ಜನರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT