ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ಕ್ ಚುನಾವಣಾ ಆಯೋಗಗಳ ವೇದಿಕೆ

Last Updated 2 ಮೇ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮುಕ್ತ ಹಾಗೂ ನಿಷ್ಪಕ್ಷಪಾತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಸಾರ್ಕ್ ದೇಶಗಳ ಚುನಾವಣಾ ಆಯೋಗಗಳು ಪರಸ್ಪರ ಸಹಕಾರಕ್ಕೆ ಮುಂದಾಗಿದ್ದು ಜಂಟಿ ವೇದಿಕೆಯೊಂದನ್ನು ಸ್ಥಾಪಿಸಿಕೊಂಡಿವೆ.

ದೆಹಲಿಯಲ್ಲಿ ಬುಧವಾರ ಮುಕ್ತಾಯಗೊಂಡ ಸಾರ್ಕ್ ದೇಶಗಳ ಚುನಾವಣಾ ಆಯುಕ್ತರ ಸಮಾವೇಶದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದಲ್ಲದೇ ಚುನಾವಣೆಯ ಅನುಭವವನ್ನು ಪರಸ್ಪರ ಹಂಚಿಕೊಳ್ಳಲು ಭಾರತ, ಆಫ್ಘಾನಿಸ್ತಾನ, ಭೂತಾನ್, ಬಾಂಗ್ಲಾದೇಶ, ಮಾಲ್ಡೀವ್ಸ್, ನೇಪಾಳ, ಪಾಕಿಸ್ತಾನ ಹಾಗೂ ಶ್ರೀಲಂಕಾ ಒಪ್ಪಂದವೊಂದಕ್ಕೆ ಸಹಿ ಹಾಕಿವೆ.
ಚುನಾವಣಾ ಆಯೋಗಗಳ ವೇದಿಕೆಯ ಪ್ರಥಮ ಸಭೆ ಭೂತಾನ್‌ನಲ್ಲಿ ಮುಂದಿನ ವರ್ಷ ನಡೆಯಲಿದ್ದು, ಭಾರತ ಈ ಸಭೆಯ ಅಧ್ಯಕ್ಷತೆ ವಹಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT