ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲ ನೀಡಲು ಆಗ್ರಹಿಸಿ ಪ್ರತಿಭಟನೆ

Last Updated 12 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ಕೃಷಿಕರು, ಕೃಷಿ ಕಾರ್ಮಿಕರು ಹಾಗೂ ಸಣ್ಣ ವ್ಯಾಪಾರಸ್ಥರಿಗೆ ಸಾಲ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಇಲ್ಲಿನ ಪ್ರಗತಿ ಗ್ರಾಮೀಣ ಬ್ಯಾಂಕ್ ಶಾಖೆ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಮಾತನಾಡಿ, ಬ್ಯಾಂಕ್‌ಗೆ ವರ್ಷದ ಹಿಂದೆ ಸಾಲ ಕೇಳಿ 335 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಇದುವರೆಗೆ ಸಾಲ ಮಾತ್ರ ಸಿಕ್ಕಿಲ್ಲ. ಬ್ಯಾಂಕ್ ಕೃಷಿಕರು, ಕೃಷಿ ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳನ್ನು ನಿರ್ಲಕ್ಷಿಸುತ್ತಿದೆ. ಸಾಲ ನೀಡುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮಾರ್ಗದರ್ಶಿ ಸೂತ್ರಗಳನ್ನು ಗಾಳಿಗೆ ತೂರಿದೆ ಎಂದು ಆಪಾದಿಸಿದರು. ಜಿಲ್ಲಾಧಿಕಾರಿ ಸಾಲ ನೀಡುವ ಬಗ್ಗೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರನ್ನು ಕರೆಸಿ ಮಾತನಾಡುವ ಭರವಸೆ ನೀಡಿದ್ದಾರೆ. ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂದಕ್ಕೆ ಪಡೆಯಲಾಗಿದೆ ಎಂದು ಪ್ರಕಟಿಸಿದರು.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ವೀರಪ್ಪರೆಡ್ಡಿ, ಕಾರ್ಯದರ್ಶಿ ಪಿ.ಆರ್.ನವೀನ್‌ಕುಮಾರ್, ಮುಖಂಡರಾದ ವಿಶ್ವನಾಥ್, ಚಿಕ್ಕವೆಂಕಟೇಶ್, ವಿ.ಆನಂದ್, ಎಸ್.ಈಶ್ವರರೆಡ್ಡಿ, ವೆಂಕಟರಾಯಪ್ಪ, ಸಿ.ಎಂ.ಗೌಡ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT