ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲಬಾಧೆ: ಜಗಳೂರು ರೈತ ಆತ್ಮಹತ್ಯೆ

Last Updated 21 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಜಗಳೂರು (ದಾವಣಗೆರೆ ಜಿಲ್ಲೆ): ಮಳೆ ಇಲ್ಲದೇ ಬೆಳೆ ಹಾನಿಯಿಂದ ಕಂಗಾಲಾದ ರೈತನೊಬ್ಬ ಹೊಲದಲ್ಲೇ ನೇಣಿಗೆ ಶರಣಾದ ಘಟನೆ ತಾಲ್ಲೂಕಿನ ಅಣಬೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಬಿ.ಎಂ. ನಾಗಯ್ಯ(56) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಗ್ರಾಮದ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ನಲ್ಲಿ ರೂ 50 ಸಾವಿರ ಹಾಗೂ ಖಾಸಗಿಯಾಗಿ ಸಾಲ ಪಡೆದು ಐದು ಎಕರೆಯಲ್ಲಿ ಮೆಕ್ಕೆಜೋಳ ಹಾಗೂ ಶೇಂಗಾ ಬೆಳೆದಿದ್ದರು.

ಆದರೆ ಮಳೆಯ ಕೊರತೆಯಿಂದ ಬೆಳೆ ಸಂಪೂರ್ಣ ಒಣಗಿ ನಿಂತಿದೆ. ಇದರಿಂದ ಆತಂಕಕ್ಕೆ ಒಳಗಾಗಿ ಹೊಲದಲ್ಲಿರುವ ಹುಣಸೆ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪುತ್ರ ಸಿದ್ದೇಶ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT