ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಸಾಹಿತ್ಯಕ್ಕೆ ಕೃಷ್ಣಶರ್ಮರ ಕೊಡುಗೆ ಅಪಾರ'

Last Updated 17 ಜುಲೈ 2013, 6:22 IST
ಅಕ್ಷರ ಗಾತ್ರ

ಜಾವಗಲ್: ಕಾವ್ಯ, ಕಾದಂಬರಿ, ನಾಟಕ, ಆತ್ಮಚರಿತ್ರೆ, ವಿಮರ್ಶೆ, ಸಂಶೋಧನೆ ಸೇರಿದಂತೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದವರು ಡಾ.ಬೆಟಗೇರಿ ಕೃಷ್ಣಶರ್ಮ ಕೊಡುಗೆ ಅಪಾರ ಎಂದು ಸಾಹಿತಿ ಸತೀಶ್ ಕುಲಕರ್ಣಿ ತಿಳಿಸಿದರು.

  ಪಟ್ಟಣದ ಗಣಪತಿ ಸಮುದಾಯ ಭವನದಲ್ಲಿ ಡಾ.ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್, ಬೆಂಗಳೂರಿನ ಸ್ವರ ಸುರಭಿ ಟ್ರಸ್ಟ್,  ಹಾಸನದ ಬೆಳ್ಳಿ ಮಂಡಲ ಜಿಲ್ಲಾ ಸಮಿತಿ ಆಶ್ರಯದಲ್ಲಿ ಈಚೆಗೆ ಏರ್ಪಡಿಸಿದ್ದ `ಬನ್ನಿ ನಮ್ಮ ಹಾಡಿಗೆ' ಎಂಬ ಭಾವಗೀತೆಗಳ ತರಬೇತಿ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಮಾತನಾಡಿದರು. ಗ್ರಾಮೀಣ ಭಾಗದ ಮಕ್ಕಳಲ್ಲಿ ನಾಡು, ನುಡಿ, ಸಂಸ್ಕೃತಿ ಹಾಗೂ ಸುಗಮ ಸಂಗೀತದ ಬಗ್ಗೆ ಅಭಿಮಾನ ಬೆಳೆಸುವ ಹೊಣೆ ಪೋಷಕರದ್ದಾಗಿದೆ ಎಂದರು.

  ಸ್ವರ ಸುರಭಿ ಟ್ರಸ್ಟ್ ಅಧ್ಯಕ್ಷ ಶ್ರೀಧರ್ ಅಯ್ಯರ್, ಸಾಹಿತಿ ಸತೀಶ್ ಕುಲಕರ್ಣಿ, ಸಂಗೀತ ನಿರ್ದೇಶಕ ಮೃತ್ಯುಂಜಯ ದೊಡ್ಡವಾಡ್, ಬೆಳ್ಳಿಮಂಡಲ ಜಿಲ್ಲಾ ಸಮಿತಿ ಅಧ್ಯಕ್ಷ ಜಾವಗಲ್ ಪ್ರಸನ್ನ ಕುಮಾರ್ ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಸದಸ್ಯೆ ಲಕ್ಷ್ಮೀ ರವಿಶಂಕರ್, ಯೋಗ ಶಿಕ್ಷಕ ರಂಗಸ್ವಾಮಿ, ಬನಶಂಕರಿ ಮಹಿಳಾ ಸಂಘದ ಅಧ್ಯಕ್ಷೆ ಶಾಂತಮ್ಮ ವಿಪ್ರ ಮಹಿಳಾ ಸಂಘದ ಅಧ್ಯಕ್ಷೆ ಗಿರಿಜಾ ನರಸಿಂಹಸ್ವಾಮಿ, ಜಾವಗಲ್ ಹೋಬಳಿ ಜಾನಪದ ಪರಿಷತ್ ಅಧ್ಯಕ್ಷ ಕೃಷ್ಣಮೂರ್ತಿ, ಕಲಾವಿದ ನರಸಿಂಹ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT