ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಡಿಕೇಟ್ ಬ್ಯಾಂಕ್-ಐಸಿಐಸಿಐ ಪ್ರುಡೆನ್ಷಿಯಲ್ ಒಪ್ಪಂದ

Last Updated 4 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮ್ಯೂಚುವಲ್ ಫಂಡ್ ವಿತರಣೆಗಾಗಿ `ಸಿಂಡಿಕೇಟ್ ಬ್ಯಾಂಕ್~ ಮತ್ತು `ಐಸಿಐಸಿಐ ಪ್ರುಡೆನ್ಷಿಯಲ್ ಮ್ಯೂಚುವಲ್ ಫಂಡ್~ ಕಂಪೆನಿ ಪರಸ್ಪರ ಒಪ್ಪಂದ ಮಾಡಿಕೊಂಡಿವೆ.

`ಬ್ಯಾಂಕ್‌ನ ದೇಶದಾದ್ಯಂತದ 2709 ಶಾಖೆಗಳ ಮೂಲಕ ಐಸಿಐಸಿಐ ಪ್ರುಡೆನ್ಷಿಯಲ್ ಎಂಎಫ್‌ನ ವಿವಿಧ ಯೋಜನೆಗಳನ್ನು ಮಾರಾಟ ಮಾಡಲಾಗುವುದು. ಇದರಿಂದ ಬ್ಯಾಂಕ್‌ನ ಶುಲ್ಕ ಆಧಾರಿತ ಆದಾಯ ಹೆಚ್ಚಲಿದೆ ಎಂದು ಸಿಂಡಿಕೇಟ್ ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕ ಎಂ.ಆಂಜನೇಯ ಹೇಳಿದ್ದಾರೆ.

ಐಸಿಐಸಿಐ ಪ್ರುಡೆನ್ಷಿಯಲ್‌ನ ವ್ಯವಸ್ಥಾಪಕ ನಿರ್ದೇಶಕ ನಿಮೇಶ್ ಷಾ, `ಮ್ಯುಚುವಲ್ ಫಂಡ್ ಉದ್ಯಮದಲ್ಲಿ ಚಿಲ್ಲರೆ ಹೂಡಿಕೆದಾರರ ಪಾತ್ರವೂ ದೊಡ್ಡದೆ. ಗ್ರಾಮೀಣ ಭಾಗದಲ್ಲಿ ಇಂಥ ಗ್ರಾಹಕರನ್ನು ಸಿಂಡಿಕೇಟ್ ಬ್ಯಾಂಕ್ ಮೂಲಕ ತಲುಪಲು ಸಾಧ್ಯವಾಗಲಿದೆ~ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT