ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಡಿಕೇಟ್ ಬ್ಯಾಂಕ್‌ನಿಂದ 200 ಹೊಸ ಶಾಖೆ

Last Updated 18 ಡಿಸೆಂಬರ್ 2010, 8:40 IST
ಅಕ್ಷರ ಗಾತ್ರ

ಬೆಂಗಳೂರು: ‘ಆರ್ಥಿಕ ಸೇರ್ಪಡೆ’ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕ್, 2011ರ ಮಾರ್ಚ್ ಅಂತ್ಯದ ಹೊತ್ತಿಗೆ 200 ಹೊಸ ಶಾಖೆಗಳನ್ನು ಆರಂಭಿಸಲು ನಿರ್ಧರಿಸಿದೆ. ದೇಶದಾದ್ಯಂತ ಸದ್ಯಕ್ಕೆ ಬ್ಯಾಂಕ್ 2,348 ಶಾಖೆಗಳ ಮೂಲಕ 24.5 ದಶಲಕ್ಷ ಗ್ರಾಹಕರಿಗೆ ಬ್ಯಾಂಕಿಂಗ್ ಸೇವೆ ಒದಗಿಸುತ್ತಿದೆ. 1928ರಲ್ಲಿಯೇ ಬ್ಯಾಂಕ್ ‘ಪಿಗ್ಮಿ ಠೇವಣಿ ಯೋಜನೆ’ ಮೂಲಕ ಎಲ್ಲರಿಗೂ ಬ್ಯಾಂಕಿಂಗ್ ಸೇವೆ ಕಲ್ಪಿಸುವ ಪರಿಕಲ್ಪನೆ ಜಾರಿಗೆ ತಂದಿತ್ತು.

2000ಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ಗ್ರಾಮಗಳಿಗೆ ಬ್ಯಾಂಕಿಂಗ್ ಸೇವೆ ಕಲ್ಪಿಸುವ ‘ಆರ್ಥಿಕ ಸೇರ್ಪಡೆ’ ಕಾರ್ಯಕ್ರಮದಡಿ ಸಿಂಡಿಕೇಟ್ ಬ್ಯಾಂಕ್‌ಗೆ 2012ರ ಮಾರ್ಚ್ ತಿಂಗಳಾಂತ್ಯದ ಹೊತ್ತಿಗೆ 1,620 ಗ್ರಾಮಗಳಿಗೆ ಮತ್ತು 2000ಕ್ಕಿಂತ ಕಡಿಮೆ ಜನಸಂಖ್ಯೆ ಇರುವ 3,270 ಗ್ರಾಮಗಳಿಗೆ 2013ರ ಮಾರ್ಚ್ ಅಂತ್ಯದ ಹೊತ್ತಿಗೆ ಬ್ಯಾಂಕಿಂಗ್ ಸೇವೆ ಒದಗಿಸುವ ಗುರಿ ನಿಗದಿಪಡಿಸಲಾಗಿದೆ ಎಂದು ಬ್ಯಾಂಕ್‌ನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT