ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂದಗಿ ಪ್ರಕರಣ: ತನಿಖೆ ಪ್ರಗತಿಯಲ್ಲಿ - ಅಶೋಕ

Last Updated 23 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸಿಂದಗಿಯಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿ ಸಿಕ್ಕಿಬಿದ್ದಿರುವ ಆರೋಪಿಗಳು ಶ್ರೀರಾಮಸೇನೆ ಕಾರ್ಯಕರ್ತರು ಎಂಬುದು ಖಚಿತವಾಗಿದ್ದು, ಈ ಕುರಿತು ತನಿಖೆ ಇನ್ನೂ ಪ್ರಗತಿಯಲ್ಲಿದೆ. ತನಿಖೆ ಪೂರ್ಣಗೊಂಡ ನಂತರ ಶ್ರೀರಾಮಸೇನೆ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ನಿರ್ಧರಿಸಲಾಗುವುದು ಎಂದು ಗೃಹ ಸಚಿವ ಆರ್.ಅಶೋಕ ಸೋಮವಾರ ಇಲ್ಲಿ ತಿಳಿಸಿದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಕೋಮು ಗಲಭೆಗಳ ಸಂಖ್ಯೆ ಇಳಿಮುಖವಾಗಿದೆ. ಇದಕ್ಕೂ ಮೊದಲು ವರ್ಷಕ್ಕೆ 28ರಿಂದ 30 ಕೋಮು ಗಲಭೆಗಳು ಸಂಭವಿಸುತ್ತಿದ್ದವು. ಈಗ ಅವುಗಳ ಸಂಖ್ಯೆ 7ರಿಂದ 8ಕ್ಕೆ ಇಳಿದಿದೆ. ಮುಂದೆಯೂ ಕಟ್ಟೆಚ್ಚರ ವಹಿಸಿ, ಅಹಿತಕರ ಘಟನೆಗಳಿಗೆ ಅವಕಾಶ ಇಲ್ಲದಂತೆ ನೋಡಿಕೊಳ್ಳಲಾಗುವುದು ಎಂದು ಸುದ್ದಿಗಾರರಿಗೆ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT