ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಧನೂರು: ಅರೆ ಬೆತ್ತಲೆ ಮೆರವಣಿಗೆ

Last Updated 28 ನವೆಂಬರ್ 2011, 19:30 IST
ಅಕ್ಷರ ಗಾತ್ರ

ಸಿಂಧನೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬತ್ತಕ್ಕೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿ ಸೋಮವಾರ ಜೆಡಿಎಸ್ ಹಾಗೂ ರೈತ ಸಂಘದ ಕಾರ್ಯಕರ್ತರು ಅರೆ ಬೆತ್ತಲೆ ಮೆರವಣಿಗೆಯ್ಲ್ಲಲಿ ಬಂದು ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದರು. ಆಗ ಪೊಲೀಸರು ಅವರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.

ಜೆಡಿಎಸ್ ಮತ್ತಿತರ ಸಂಘಟನೆಗಳು ಸರಣಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ರೈತರ ಬೇಡಿಕೆಗೆ ಸ್ಪಂದಿಸದ ಜಿಲ್ಲಾಧಿಕಾರಿಗಳ ವರ್ತನೆಯನ್ನು ಆಕ್ಷೇಪಿಸಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಂ.ಡಿ.ನದೀಮುಲ್ಲಾ ನೇತೃತ್ವದ್ಲ್ಲಲಿ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಲು ಕಾರ್ಯಕರ್ತರು ಮುಂದಾದರು.

ಪ್ರತಿಭಟನಾಕಾರರು ತಹಸೀಲ್ದಾರ್ ಕಚೇರಿಗೆ ನುಗ್ಗಲು ಯತ್ನಿಸಿದಾಗ ಪೊಲೀಸರು  ಎಂ.ಡಿ.ನದೀಮುಲ್ಲಾ, ಅಮೀನಪಾಷಾ ದಿದ್ದಗಿ, ಶರಣಪ್ಪ ಮಳ್ಳಿ, ವೆಂಕೋಬ ಬಂಕದ್ ಮತ್ತಿತರರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆತಂದರು.

ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಬಸವರಾಜ ನಾಡಗೌಡ, ತಾಲ್ಲೂಕು ಅಧ್ಯಕ್ಷ ಎಂ.ಲಿಂಗಪ್ಪ ಮತ್ತಿತರರು ಕಾರ್ಯಕರ್ತರನ್ನು ಬಿಡುಗಡೆಗೊಳಿಸಿದರು. ಸಹಾಯಕ ಆಯುಕ್ತ ಘೋಷ್, ತಹಶೀಲ್ದಾರ್ ಕೆ.ನರಸಿಂಹ  ಸತ್ಯಾಗ್ರಹ ನಿರತರ ಬಳಿಗೆ ಬಂದು ಮುಖ್ಯಮಂತ್ರಿಗಳು ಕರೆದ ಸಭೆಗೆ ಜಿಲ್ಲಾಧಿಕಾರಿಗಳು ತೆರಳಿದ್ದಾರೆ.
 

ಅವರ ಪ್ರತಿನಿಧಿಯಾಗಿ ತಾವು ಆಗಮಿಸಿರುವುದಾಗಿ ತಿಳಿಸಿದರು. ಬತ್ತಕ್ಕೆ ವೈಜ್ಞಾನಿಕ ಬೆಲೆ ನಿಗದಿಪಡಿಸುವ ಅಧಿಕಾರ ತಮ್ಮ ವ್ಯಾಪ್ತಿಗೆ ಬರುವುದಿಲ್ಲ. ಇಷ್ಟರಲ್ಲಿ ಬತ್ತ ಖರೀದಿ ಕೇಂದ್ರಗಳನ್ನು ಆರಂಭಿಸುವುದಾಗಿ ಭರವಸೆ ನೀಡಿದರು.

ಅದನ್ನೊಪ್ಪದ ಜೆಡಿಎಸ್- ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ತಾವು ಹೋರಾಟವನ್ನು ಕೈಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT