ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಧು, ದೀಪಾಗೆ ತವರ ಸ್ವಾಗತ

ಒಲಿಂಪಿಕ್ಸ್‌ನಲ್ಲಿ ಹೆಮ್ಮೆ ತಂದ ಯುವತಿಯರಿಗೆ ಖೇಲ್‌ ರತ್ನ; ಶೂಟರ್‌ ಜಿತು ರಾಯ್‌ಗೂ ಸಂದ ಗೌರವ
Last Updated 22 ಆಗಸ್ಟ್ 2016, 19:44 IST
ಅಕ್ಷರ ಗಾತ್ರ

ಹೈದರಾಬಾದ್‌/ ಅಗರ್ತಲಾ (ಪಿಟಿಐ):  ರಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದು ದೇಶಕ್ಕೆ ಹೆಮ್ಮೆ ತಂದಿತ್ತ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ. ಸಿಂಧು ಸೋಮವಾರ ಬೆಳಿಗ್ಗೆ ಹೈದರಾಬಾದ್‌ಗೆ ಮರಳಿದ್ದು, ಸಂಭ್ರಮದ ಸ್ವಾಗತ ಲಭಿಸಿತು.

ಜಿಮ್ನಾಸ್ಟಿಕ್ಸ್‌ನಲ್ಲಿ ನಾಲ್ಕನೇ ಸ್ಥಾನ ಪಡೆದು ಐತಿಹಾಸಿಕ ಸಾಧನೆ ಮಾಡಿದ ದೀಪಾ ಕರ್ಮಾಕರ್‌ ಅವರಿಗೆ ತ್ರಿಪುರಾದ ಅಗರ್ತಲಾದಲ್ಲಿ ಅದ್ಧೂರಿ ಸ್ವಾಗತ ದೊರೆಯಿತು. ಸಿಂಧು ಅವರನ್ನು ಸ್ವಾಗತಿಸಲು  ರಾಜೀವ್‌ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು.

ನಾಲ್ವರಿಗೆ ಖೇಲ್ ರತ್ನ (ನವದೆಹಲಿ ವರದಿ):  ಪಿ.ವಿ. ಸಿಂಧು, ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತೆ ಕುಸ್ತಿಪಟು ಸಾಕ್ಷಿ ಮಲಿಕ್, ದೀಪಾ ಕರ್ಮಾಕರ್ ಮತ್ತು ಶೂಟರ್  ಜಿತು ರಾಯ್ ಅವರಿಗೆ ರಾಜೀವ್‌ಗಾಂಧಿ ಖೇಲ್ ರತ್ನ ಪುರಸ್ಕಾರ ನೀಡಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವಾಲಯ ಸೋಮವಾರ ಘೋಷಿಸಿದೆ.

ಇದೇ ಮೊದಲ ಬಾರಿಗೆ ಖೇಲ್‌ ರತ್ನ ಪ್ರಶಸ್ತಿಯನ್ನು ನಾಲ್ವರಿಗೆ ನೀಡಲಾಗುತ್ತಿದೆ. ಈ ಪ್ರಶಸ್ತಿಯು ಪದಕ, ಪ್ರಮಾಣಪತ್ರ ಮತ್ತು
₹ 7.5 ಲಕ್ಷ ನಗದು ಒಳಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT