ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ವಿರುದ್ಧ ದೂರು: ಇಂದು ಪುನಃ ವಿಚಾರಣೆ

Last Updated 1 ಫೆಬ್ರುವರಿ 2011, 19:10 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಸರ್ಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿರುವುದಾಗಿ ದೂರಿ ವಕೀಲ ಸಿರಾಜಿನ್ ಬಾಷಾ ಅವರು ದಾಖಲು ಮಾಡಿರುವ 3ನೇ ದೂರಿನ ವಿಚಾರಣೆಯನ್ನು ನಗರದ ಲೋಕಾಯುಕ್ತ ವಿಶೇಷ ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ.

ಭೂಹಗರಣದ ತನಿಖೆಯನ್ನು ಯಾರು ಕೈಗೊಳ್ಳಬೇಕು ಎಂಬ ವಿವಾದವು ಹೈಕೋರ್ಟ್‌ನಲ್ಲಿ ಇನ್ನೂ ಇತ್ಯರ್ಥ ಆಗಬೇಕಿದೆ.ದೂರಿನ ವಿಚಾರಣೆಗೆ ತಡೆ ನೀಡಬೇಕು ಎಂದು ಯಡಿಯೂರಪ್ಪನವರ ಅಳಿಯ ಸೋಹನ್‌ಕುಮಾರ್ ಮಂಗಳವಾರ ಅರ್ಜಿ   ಸಲ್ಲಿಸಿದರು.

 ಈ ಅರ್ಜಿಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಬಾಷಾ ಪರ ವಕೀಲ ಸಿ.ಎಚ್.ಹನುಮಂತರಾಯರು ಹೇಳಿದ ಕಾರಣ ವಿಚಾರಣೆಯನ್ನು ನ್ಯಾಯಾಧೀಶ ಸಿ.ಬಿ.ಹಿಪ್ಪರಗಿ ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT